ಬಂಟ್ವಾಳ (ಕರಾವಳಿ ಟೈಮ್ಸ್) : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ವಿಟ್ಲ ಇದರ ವತಿಯಿಂದ ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವನ್ನು ಓದಿಸಿ ಜಾಗೃತಿ ಮೂಡಿಸುವ ಬೀದಿ ನಾಟಕ ಪ್ರದರ್ಶನ ಇರಾ ಮಲಯಾಳಿ ಬಿಲ್ಲವ ಸಭಾ ಭವನದಲ್ಲಿ ಕಲಾವಿದ ದಿನೇಶ್ ಅತ್ತಾವರ ಹಾಗೂ ತಂಡದಿಂದ ನಡೆಯಿತು.
ಈ ಸಂದರ್ಭ ಮಾತನಾಡಿದ ಇರಾ ಗ್ರಾ.ಪಂ. ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಹೆಣ್ಣು ಮಕ್ಕಳ ಶೈಕ್ಷಣಿಕ ಅಭಿವೃದ್ದಿಗಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದು ಪೆÇೀಷಕರು ಈ ಬಗ್ಗೆ ಜಾಗೃತಗೊಂಡು ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ಗ್ರಾ.ಪಂ. ಉಪಾಧ್ಯಕ್ಷೆ ಚಂದ್ರಾವತಿ, ಪಂಚಾಯತ್ ಪಿಡಿಒ ಸುಶೀಲಾ, ಕಾರ್ಯದರ್ಶಿ ನಳಿನಿ ಎ.ಕೆ., ಗ್ರಾ.ಪಂ. ಸದಸ್ಯರು, ಶಾಲಾ ಮುಖ್ಯ ಶಿಕ್ಷಕರು, ಅಧ್ಯಾಪಕ ವೃಂದ, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಮಕ್ಕಳು, ಗ್ರಾಮಸ್ಥರು ಪಾಲ್ಗೊಂಡಿದ್ದರು. ಅಂಗನವಾಡಿ ಮೇಲ್ವಿಚಾರಕಿ ರೇಣುಕಾ ವಂದಿಸಿದರು.
0 comments:
Post a Comment