ಬಂಟ್ವಾಳ (ಕರಾವಳಿ ಟೈಮ್ಸ್) : ಸ್ವಾತಂತ್ರ್ಯ ಯೋಧ ಡಾ. ಅಮ್ಮೆಂಬಳ ಬಾಳಪ್ಪ ಸ್ಮಾರಕ ಸೇವಾ ಪ್ರತಿಷ್ಠಾನ ಬಂಟ್ವಾಳ, ಕುಲಾಲ ಎಜ್ಯುಕೇಷನ್ ಟ್ರಸ್ಟ್ ಬಂಟ್ವಾಳ, ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಬಂಟ್ವಾಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಡಾ. ಅಮ್ಮೆಂಬಳ ಬಾಳಪ್ಪ ಅವರ 98ನೇ ಜನ್ಮದಿನಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಫೆ. 23 ರಂದು ಭಾನುವಾರ ಬೆಳಿಗ್ಗೆ 10.30ಕ್ಕೆ ಬಿ.ಸಿ.ರೋಡಿನ ಪೊಸಳ್ಳಿಯ ಕುಲಾಲ ಸಮುದಾಯ ಭವನದಲ್ಲಿ ನಡೆಯಲಿದೆ.
ಪ್ರತಿಷ್ಠಾನದ ಅಧ್ಯಕ್ಷ ಅಮ್ಮೆಂಬಳ ಆನಂದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಾಹಿತಿ ಮಹೇಂದ್ರನಾಥ ಸಾಲೆತ್ತೂರು, ನ್ಯಾಯವಾದಿ ರಾಮ್‍ಪ್ರಸಾದ್ ಎಸ್. ಭಾಗವಹಿಸಲಿದ್ದಾರೆ. ಕುಲಾಲ ಎಜ್ಯುಕೇಷನ್ ಟ್ರಸ್ಟ್‍ನ ಮ್ಯಾನೇಜಿಂಗ್ ಟ್ರಸ್ಟಿ ಪಿ. ಕೃಷ್ಣದಾಸ್, ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷೆ ಜಯಂತಿ ಗೌರವ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
ಜಾಹೀರಾತುಗಳು
0 comments:
Post a Comment