ಬಂಧಿತ ಆರೋಪಿ ಮನೋಹರ |
ವಿಟ್ಲ (ಕರಾವಳಿ ಟೈಮ್ಸ್) : ಇಲ್ಲಿಗೆ ಸಮೀಪದ ಪುಣಚ ಗ್ರಾಮದ ನಿವಾಸಿ ಮನೋಹರ ಎಂಬಾತ ಏಳನೇ ತರಗತಿ ಶಾಲಾ ಬಾಲಕಿಗೆ ಕಿರುಕುಳ ನೀಡಿದ ಆರೋಪದಲ್ಲಿ ವಿಟ್ಲ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಈತ ಬಾಲಕಿಯನ್ನು ಸುಮಾರು ಒಂದು ವರ್ಷದಿಂದ ಪ್ರೀತಿಸುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ. ಫೆ. 2 ರಂದು ಬಾಲಕಿಯು ಪರಿಯಾಲ್ತಡ್ಕ ಪೇಟೆಗೆ ಹೋಗಿ ಸಾಮಾಗ್ರಿಗಳನ್ನು ತೆಗೆದುಕೊಂಡು ವಾಪಾಸ್ ಬರುತ್ತಿದ್ದಾಗ ಪುಣಚ ಗ್ರಾಮದ ತೋರಣಕಟ್ಟೆ ಎಂಬಲ್ಲಿ ಒಬ್ಬಳೇ ನಿಂತಿದ್ದ ವೇಳೆ ಆರೋಪಿ ಮೋಟಾರ್ ಸೈಕಲಿನಲ್ಲಿ ಬಂದು ಕಿರುಕುಳ ನೀಡಿದ್ದಾನೆ ಎನ್ನಲಾಗಿದ್ದು, ಈ ಹಿನ್ನಲೆಯಲ್ಲಿ ಫೆ. 21 ರಂದು ಬಾಲಕಿಯ ಹೆತ್ತವರು ವಿಟ್ಲ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿ ಮನೋಹರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
0 comments:
Post a Comment