ಬಂಟ್ವಾಳ (ಕರಾವಳಿ ಟೈಮ್ಸ್) : ತಾಲೂಕಿನ ಮೆಲ್ಕಾರ್ ಸಮೀಪದ ಮಾರ್ನಬೈಲು ಖಾಸಗಿ ಕಾಲೇಜಿಗೆ ಕಳ್ಳರು ನುಗ್ಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕಚೇರಿ ಬಾಗಿಲು ಒಡೆದು ಒಳ ನುಗ್ಗಿರುವ ಕಳ್ಳರು ಕಪಾಟಿನ ಬಾಗಿಲು ತೆರೆದು ಚೆಲ್ಲಾಪಿಲ್ಲಿಗೊಳಿಸಿದ್ದಾರೆ.
ಸಿಸಿ ಕ್ಯಾಮರಾ ಹಾಗೂ ಮಾನಿಟರ್ ಕಳವು ನಡೆಸಿದ್ದು, ಕಳವುಗೈದ ಸೊತ್ತುಗಳ ಒಟ್ಟು ಮೌಲ್ಯ ಸುಮಾರು 20 ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ.
ಮಾ. 29 ರಂದು ಕಾಲೇಜಿನ ಬಾಗಿಲು ತೆರೆದ ಸ್ಥಿತಿಯಲ್ಲಿದ್ದುದನ್ನು ಕಂಡ ಸ್ಥಳೀಯರು ಕಾಲೇಜು ಮುಖ್ಯಸ್ಥರಿಗೆ ಮಾಹಿತಿ ನೀಡಿದ್ದು, ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಒಂದು ವಾರದಿಂದ ಕಾಲೇಜಿಗೆ ರಜೆ ಇದ್ದುದರಿಂದ ಪರಿಸ್ಥಿತಿಯ ಲಾಭ ಪಡೆದುಕೊಂಡು ಕಳ್ಳರು ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ.
ಕಾಲೇಜು ಪ್ರಾಂಶುಪಾಲರು ನೀಡಿದ ದೂರಿನಂತೆ ಬಂಟ್ವಾಳ ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment