ಕರ್ನಾಟಕ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ನಿಧನ - Karavali Times ಕರ್ನಾಟಕ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ನಿಧನ - Karavali Times

728x90

8 March 2020

ಕರ್ನಾಟಕ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ನಿಧನನವದೆಹಲಿ (ಕರಾವಳಿ ಟೈಮ್ಸ್) : ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ (82) ಅವರು ಅನಾರೋಗ್ಯದಿಂದ ಭಾನುವಾರ ರಾತ್ರಿ ನಿಧನರಾದರು.

1937 ರಲ್ಲಿ ಜನಿಸಿದ ಭಾರದ್ವಾಜ್ 2009 ರ ಜೂನ್ ನಿಂದ 2014 ರ ಜೂನ್ 28 ರವರೆಗೆ ಕರ್ನಾಟಕದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದರು. ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದ ಅವರು 1984ರಲ್ಲಿ ರಾಜ್ಯಸಭಾ ಸದಸ್ಯರಾಗಿ ನೇಮಕಗೊಂಡು ಕೇಂದ್ರ ಕಾನೂನು ಸಚಿವರಾಗಿಯೂ ಕರ್ತವ್ಯ ನಿರ್ವಹಿಸಿದ್ದರು.

    ಹಂಸರಾಜ್ ಭಾರದ್ವಾಜ್ ಅವರ ಅವಧಿಯಲ್ಲಿ 4 ಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಿದ್ದರು. ಸಿಎಂ ಯಡಿಯೂರಪ್ಪ ವಿರುದ್ಧ ಎಫ್‍ಐಆರ್ ದಾಖಲಿಸಲು ಅನುಮತಿ ನೀಡಿದ್ದ ಭಾರದ್ವಾಜ್ ಬಿಜೆಪಿ ಸರ್ಕಾರವನ್ನು ಅಮಾನತಿನಲ್ಲಿಟ್ಟಿದ್ದು ದೊಡ್ಡ ಮಟ್ಟದ ಸುದ್ದಿಯಾಗಿತ್ತು. ಮೃತರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ನವದೆಹಲಿಯ ನಿಗಮ್ ಬೋದ್ ಘಾಟ್ ನಲ್ಲಿ ಸೋಮವಾರ ಭಾರಧ್ವಾಜ್ ಅವರ ಅಂತ್ಯಕ್ರಿಯೆ ನಡೆಯಲಿದೆ.
  • Blogger Comments
  • Facebook Comments

0 comments:

Post a Comment

Item Reviewed: ಕರ್ನಾಟಕ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ನಿಧನ Rating: 5 Reviewed By: karavali Times
Scroll to Top