ತುಳು ಸಾಹಿತ್ಯ ಅಕಾಡೆಮಿ ನಾಮ ನಿರ್ದೇಶನ ಸದಸ್ಯರಾಗಿ ಕಡಂದಲೆ ಸುರೇಶ್ ಭಂಡಾರಿ ನೇಮಕ - Karavali Times ತುಳು ಸಾಹಿತ್ಯ ಅಕಾಡೆಮಿ ನಾಮ ನಿರ್ದೇಶನ ಸದಸ್ಯರಾಗಿ ಕಡಂದಲೆ ಸುರೇಶ್ ಭಂಡಾರಿ ನೇಮಕ - Karavali Times

728x90

3 March 2020

ತುಳು ಸಾಹಿತ್ಯ ಅಕಾಡೆಮಿ ನಾಮ ನಿರ್ದೇಶನ ಸದಸ್ಯರಾಗಿ ಕಡಂದಲೆ ಸುರೇಶ್ ಭಂಡಾರಿ ನೇಮಕ

ಕಡಂದಲೆ ಸುರೇಶ್ ಎಸ್. ಭಂಡಾರಿ


ಮಂಗಳೂರು (ಕರಾವಳಿ ಟೈಮ್ಸ್) : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ನಾಮ ನಿರ್ದೇಶನ ಸದಸ್ಯರಾಗಿ ಕಡಂದಲೆ ಸುರೇಶ್ ಎಸ್. ಭಂಡಾರಿ ನೇಮಕಗೊಂಡಿದ್ದಾರೆ. ಕರ್ನಾಟಕ ಸರಕಾರದ ನಿರ್ದೇಶನದ ಮೇರೆಗೆ ನಾಮ ನಿರ್ದೇಶನ ಸದಸ್ಯರನ್ನು ತುಳು ಅಕಾಡೆಮಿಯ ಸರ್ವ ಸದಸ್ಯರ ಸಭೆಯಲ್ಲಿ ನೇಮಕಗೊಳಿಸಲಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲಸಾರ್ ತಿಳಿಸಿದ್ದಾರೆ.

ಮುಂಬಯಿಯಲ್ಲಿನ ತುಳು-ಕನ್ನಡಿಗರ ರಾಯಭಾರಿ ಎಂದೇ ಖ್ಯಾತರಾದ ಕಡಂದಲೆ ಸುರೇಶ್ ಭಂಡಾರಿ ಅವರು ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಸಲಹಾ ಸಮಿತಿ ಸದಸ್ಯರಾಗಿದ್ದು, ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಬಾರ್ಕೂರು ಉಡುಪಿ ಇದರ ಆಡಳಿತ ಮೊಕ್ತೇಸರ, ಅಧ್ಯಕ್ಷರಾಗಿ, ಭಂಡಾರಿ ಮಹಾ ಮಂಡಲದ ಸ್ಥಾಪಕಾಧ್ಯಕ್ಷರಾಗಿರುವರು. ಮನಿಫೆÇೀಲ್ಡ್ ಕೋ ಅಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ಇದರ ಕಾರ್ಯಾಧ್ಯಕ್ಷ, ಎಸ್.ಬಿ. ರಿಯಾಲಿಟಿ ಇದರ ಆಡಳಿತ ನಿರ್ದೇಶಕರಾಗಿ, ಅನಘಾ ಇಂಟರ್ ನ್ಯಾಷನಲ್ ಸಂಸ್ಥೆಯ ಮಾಲೀಕರು. ಕಡಂದಲೆ ಸುರೇಶ್ ಭಂಡಾರಿ ಚಾರಿಟೇಬಲ್ ಫ್ಯಾಮಿಲಿ ಟ್ರಸ್ಟ್ ಹಾಗೂ ಸಾಯಿನಾಥ್ ಮಿತ್ರ ಮಂಡಳ್ (ನೋ) ಕಪ್ ಪರೇಡ್ ಮುಂಬಯಿ ಇದರ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾಗಿ, ನಾಗೇಶ್ವರ ಸಿನಿ ಕ್ರಿಯೇಷನ್ಸ್ ಇದರ ಆಡಳಿತ ನಿರ್ದೇಶಕ, ಚಲನಚಿತ್ರ ನಿಮಾಪಕರಾಗಿ, ಮಹಾರಾಷ್ಟ್ರ ಮತ್ತು ಕರ್ನಾಟಕದಾದ್ಯಂತದ ನೂರಾರು ತುಳು-ಕನ್ನಡ ಸಂಘ-ಸಂಸ್ಥೆಗಳ ಪೆÇೀಷಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ತುಳು ಸಾಹಿತ್ಯ ಅಕಾಡೆಮಿ ನಾಮ ನಿರ್ದೇಶನ ಸದಸ್ಯರಾಗಿ ಕಡಂದಲೆ ಸುರೇಶ್ ಭಂಡಾರಿ ನೇಮಕ Rating: 5 Reviewed By: karavali Times
Scroll to Top