ರಾಜ್ಯದಲ್ಲಿ ಮತ್ತೆ 4 ಹೊಸ ಪ್ರಕರಣ ಪತ್ತೆ, ಕೊರೋನಾ ಸೋಂಕಿತರ ಸಂಖ್ಯೆ 105ಕ್ಕೇರಿಕೆ - Karavali Times ರಾಜ್ಯದಲ್ಲಿ ಮತ್ತೆ 4 ಹೊಸ ಪ್ರಕರಣ ಪತ್ತೆ, ಕೊರೋನಾ ಸೋಂಕಿತರ ಸಂಖ್ಯೆ 105ಕ್ಕೇರಿಕೆ - Karavali Times

728x90

1 April 2020

ರಾಜ್ಯದಲ್ಲಿ ಮತ್ತೆ 4 ಹೊಸ ಪ್ರಕರಣ ಪತ್ತೆ, ಕೊರೋನಾ ಸೋಂಕಿತರ ಸಂಖ್ಯೆ 105ಕ್ಕೇರಿಕೆಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆರ್ಭಟ ಮುಂದುವರೆದಿದ್ದು, ಬುಧವಾರ 4 ಹೊಸ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 105ಕ್ಕೇರಿದೆ.

ಬೆಂಗಳೂರಿನ 24 ವರ್ಷದ ಯುವಕನಲ್ಲಿ ಸೋಂಕು ದೃಢಪಟ್ಟಿದೆ. ಈತನ ಹೆಚ್ಚಿನ ವಿವರಗಳು ಇನ್ನೂ ಪತ್ತೆಯಾಗಿಲ್ಲ. ಜೊತೆಗೆ, 52ನೇ ಸೋಂಕಿತನೊಂದಿಗೆ ಸಂಪರ್ಕ ಹೊಂದಿದ್ದ ನಂಜನಗೂಡಿನ 37 ಹಾಗೂ 27 ವರ್ಷದ ವ್ಯಕ್ತಿಗಳಲ್ಲಿ ಸೋಂಕು ದೃಢಪಟ್ಟಿದೆ. ಇವರು ನಂಜನಗೂಡಿನ ಔಷಧ ತಯಾರಿಕಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರಿಬ್ಬರಲ್ಲಿ ಓರ್ವ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ 33 ವರ್ಷದ ಬೆಂಗಳೂರು ಜಿಲ್ಲೆಯ ನಿವಾಸಿಗೆ ಕೂಡ ಸೋಂಕು ತಗುಲಿದೆ.

ಇವರೆಲ್ಲರನ್ನೂ ಪ್ರತ್ಯೇಕ ಆಸ್ಪತ್ರೆಗಳಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ. ಇಲ್ಲಿಯವರೆಗೆ ರಾಜ್ಯದಲ್ಲಿ ಸೋಂಕಿನಿಂದ ಮೂವರು ಮೃತಪಟ್ಟಿದ್ದು, 9 ಜನರು ಚೇತರಿಸಿಕೊಂಡಿದ್ದಾರೆ.
  • Blogger Comments
  • Facebook Comments

0 comments:

Post a Comment

Item Reviewed: ರಾಜ್ಯದಲ್ಲಿ ಮತ್ತೆ 4 ಹೊಸ ಪ್ರಕರಣ ಪತ್ತೆ, ಕೊರೋನಾ ಸೋಂಕಿತರ ಸಂಖ್ಯೆ 105ಕ್ಕೇರಿಕೆ Rating: 5 Reviewed By: karavali Times
Scroll to Top