ಕೊರೋನಾ ಸೋಂಕಿಗೆ ಬಂಟ್ವಾಳದ ಮತ್ತೋರ್ವ ಮಹಿಳೆ ಬಲಿ : ರಾಜ್ಯದಲ್ಲಿ ಸಾವಿನ ಸಂಖ್ಯೆ 22ಕ್ಕೇರಿಕೆ, ಸೋಂಕಿತರ ಸಂಖ್ಯೆ 565ಕ್ಕೇರಿಕೆ - Karavali Times ಕೊರೋನಾ ಸೋಂಕಿಗೆ ಬಂಟ್ವಾಳದ ಮತ್ತೋರ್ವ ಮಹಿಳೆ ಬಲಿ : ರಾಜ್ಯದಲ್ಲಿ ಸಾವಿನ ಸಂಖ್ಯೆ 22ಕ್ಕೇರಿಕೆ, ಸೋಂಕಿತರ ಸಂಖ್ಯೆ 565ಕ್ಕೇರಿಕೆ - Karavali Times

728x90

30 April 2020

ಕೊರೋನಾ ಸೋಂಕಿಗೆ ಬಂಟ್ವಾಳದ ಮತ್ತೋರ್ವ ಮಹಿಳೆ ಬಲಿ : ರಾಜ್ಯದಲ್ಲಿ ಸಾವಿನ ಸಂಖ್ಯೆ 22ಕ್ಕೇರಿಕೆ, ಸೋಂಕಿತರ ಸಂಖ್ಯೆ 565ಕ್ಕೇರಿಕೆಬೆಂಗಳೂರು (ಕರಾವಳಿ ಟೈಮ್ಸ್) : ಕರ್ನಾಟಕದಲ್ಲಿ ಕೊರೋನಾ ಮರಣ ಮೃದಂಗ ಮುಂದುವರಿಸಿದ್ದು, ಕೊವಿಡ್-19ಗೆ ಗುರುವಾರ ಮತ್ತೊಬ್ಬ ಮಹಿಳೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.
ಮಂಗಳೂರಿನ ಕೊವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 67 ವರ್ಷದ ವೃದ್ಧೆ ಇಂದು ಸಂಜೆ ಮೃತಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಈ ಮಧ್ಯೆ ಸೋಂಕಿತರ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಒಂದೇ ದಿನ 30 ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 565ಕ್ಕೇರಿಕೆಯಾಗಿದೆ. ಇಲ್ಲಿಯವರೆಗೆ 22 ಜನರು ಮೃತಪಟ್ಟಿದ್ದು, 229 ಮಂದಿ ಗುಣಮುಖರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ 58 ವರ್ಷದ ಮಹಿಳೆ, ವಿಜಯಪುರದ 62 ವರ್ಷದ ವ್ಯಕ್ತಿ ಮತ್ತು 33 ವರ್ಷದ ಮಹಿಳೆ, ತುಮಕೂರಿನ 65 ವರ್ಷದ ಮಹಿಳೆ, ಬೆಂಗಳೂರು ನಗರದ 20 ಹಾಗೂ 28 ವರ್ಷದ ಯುವಕರು, 63 ವರ್ಷದ ವೃದ್ಧ ಮತ್ತು ದಾವಣಗೆರೆಯ 69 ವರ್ಷದ ವ್ಯಕ್ತಿ ಸೋಂಕಿಗೆ ಗುರಿಯಾಗಿದ್ದಾರೆ. 
ಉಳಿದಂತೆ ಬೆಳಗಾವಿಯ ಹಿರೇಬಾಗೇವಾಡಿಯ 24 ವರ್ಷದ ಇಬ್ಬರು ಮಹಿಳೆಯರು, 27 ವರ್ಷದ ವ್ಯಕ್ತಿ, 18 ವರ್ಷದ ಯುವಕ, 48 ವರ್ಷದ ಮಹಿಳೆ , 50 ವರ್ಷದ ವ್ಯಕ್ತಿ, 27 ವರ್ಷದ ಮಹಿಳೆ, 43, 16, 36 ವರ್ಷದ ವ್ಯಕ್ತಿಗಳು, 8 ವರ್ಷದ ಬಾಲಕ, 36 ವರ್ಷದ ವ್ಯಕ್ತಿ, ಬೆಳಗಾವಿ ಹುಕ್ಕೇರಿಯ 9 ವರ್ಷದ ಬಾಲಕ ಮತ್ತು 75 ವರ್ಷದ ವೃದ್ಧೆಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ನಗರದಲ್ಲಿ ಹೊಸದಾಗಿ 9 ಪ್ರಕರಣಗಳು ಪತ್ತೆಯಾಗಿದೆ 15 ವರ್ಷದ ಬಾಲಕ, 60 ವರ್ಷದ ವೃದ್ಧೆ, 4 ವರ್ಷದ ಬಾಲಕಿ, 16 ವರ್ಷದ ಯುವತಿ, 13 ವರ್ಷದ ಬಾಲಕಿ,35 ವರ್ಷದ ವ್ಯಕ್ತಿ,ಮತ್ತು 64 ವರ್ಷದ ವೃದ್ಧೆಯಲ್ಲಿ ಸೋಂಕು ದೃಢಪಟ್ಟಿದೆ. ಕಲಬುರಗಿಯಲ್ಲಿ 35 ವರ್ಷದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ.
ಬೆಂಗಳೂರು ನಗರ 141 ಸೋಂಕಿತರೊಂದಿಗೆ ಮೊದಲನೇ ಸ್ಥಾನದಲ್ಲಿದೆ. ಮೈಸೂರು 88 ಸಂಖ್ಯೆಯೊಂದಿಗೆ ಎರಡು ಹಾಗೂ ಬೆಳಗಾವಿ 67 ಪ್ರಕರಣಗಳೊಂದಿಗೆ 3ನೇ ಸ್ಥಾನದಲ್ಲಿದೆ.ವಿಜಯಪುರ 43 ಹಾಗೂ ಕಲಬುರಗಿಯಲ್ಲಿ 53 ಪ್ರಕರಣಗಳು ಪತ್ತೆಯಾಗಿವೆ.

  • Blogger Comments
  • Facebook Comments

0 comments:

Post a Comment

Item Reviewed: ಕೊರೋನಾ ಸೋಂಕಿಗೆ ಬಂಟ್ವಾಳದ ಮತ್ತೋರ್ವ ಮಹಿಳೆ ಬಲಿ : ರಾಜ್ಯದಲ್ಲಿ ಸಾವಿನ ಸಂಖ್ಯೆ 22ಕ್ಕೇರಿಕೆ, ಸೋಂಕಿತರ ಸಂಖ್ಯೆ 565ಕ್ಕೇರಿಕೆ Rating: 5 Reviewed By: karavali Times
Scroll to Top