ಕೊವಿಡ್-19 : ದೇಶಾದ್ಯಂತ 170 ಜಿಲ್ಲೆಗಳು ಹಾಟ್ ಸ್ಪಾಟ್ ಎಂದು ಘೋಷಿಸಿದ ಕೇಂದ್ರ - Karavali Times ಕೊವಿಡ್-19 : ದೇಶಾದ್ಯಂತ 170 ಜಿಲ್ಲೆಗಳು ಹಾಟ್ ಸ್ಪಾಟ್ ಎಂದು ಘೋಷಿಸಿದ ಕೇಂದ್ರ - Karavali Times

728x90

15 April 2020

ಕೊವಿಡ್-19 : ದೇಶಾದ್ಯಂತ 170 ಜಿಲ್ಲೆಗಳು ಹಾಟ್ ಸ್ಪಾಟ್ ಎಂದು ಘೋಷಿಸಿದ ಕೇಂದ್ರನವದೆಹಲಿ (ಕರಾವಳಿ ಟೈಮ್ಸ್) : ದೇಶದಲ್ಲಿ 21 ದಿನಗಳ ಕಟ್ಟು ನಿಟ್ಟಿನ ಲಾಕ್‍ಡೌನ್ ಮುಗಿದರೂ ಮಹಾಮಾರಿ ಕೊರೋನಾ ವೈರಸ್ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ 19 ದಿನ ಲಾಕ್‍ಡೌನ್ ವಿಸ್ತರಿಸಿದ್ದಾರೆ. ಅಲ್ಲದೆ ದೇಶಾದ್ಯಂತ 170 ಜಿಲ್ಲೆಗಳನ್ನು ಕೊರೋನಾ ಹಾಟ್ ಸ್ಪಾಟ್ ಎಂದು ಕೇಂದ್ರ ಸರ್ಕಾರ ಘೋಷಿಸಿದೆ.

ಕೊರೋನಾ ಸೋಂಕು ಪ್ರಕರಣಗಳು ಆಧರಿಸಿ ಜಿಲ್ಲೆಗಳನ್ನು ಮೂರು ವರ್ಗಗಳಾಗಿ ವಿಂಗಡಿಸಲಾಗಿದ್ದು, ಹಾಟ್ ಸ್ಪಾಟ್, ನಾನ್ ಹಾಟ್ ಸ್ಪಾಟ್ ಮತ್ತು ಗ್ರೀನ್ ಎಂದು ವರ್ಗೀಕರಿಸಲಾಗಿದೆ. ದೇಶಾದ್ಯಂತ ಒಟ್ಟು 170 ಜಿಲ್ಲೆಗಳನ್ನು ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರವಾಲ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಹಾಟ್ ಸ್ಪಾಟ್ ಜಿಲ್ಲೆಗಳಲ್ಲಿ ಪ್ರತಿ ಮನೆಯಲ್ಲೂ ತಪಾಸಣೆ ನಡೆಸಲಾಗುತ್ತದೆ. ಯಾವುದೇ ಪಾಸಿಟಿವ್ ಪ್ರಕರಣಗಳು ವರದಿಯಾಗದ ಜಿಲ್ಲೆಗಳಲ್ಲಿ ಎಪ್ರಿಲ್ 20ರ ನಂತರ ಲಾಕ್‍ಡೌನ್ ಸಡಿಲಗೊಳಿಸಲಾಗುವುದು ಎಂದು ಹೇಳಿದ್ದಾರೆ. ಅಲ್ಲದೆ ದೇಶದಲ್ಲಿ ಕೊರೋನಾ ಇನ್ನೂ ಸಮೂಹಕ್ಕೆ ಹೋಗಿಲ್ಲ ಎಂದು ಅಗರವಾಲ್ ಅವರು ಸ್ಪಷ್ಟಪಡಿಸಿದ್ದಾರೆ.

ಈ ಮಧ್ಯೆ ದೇಶಾದ್ಯಂತ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 12 ಸಾವಿರ ಗಡಿ ದಾಟಿದ್ದು, 392 ಮಂದಿ ಮೃತಪಟ್ಟಿದ್ದಾರೆ. ಕೋವಿಡ್-19 ಗುಣಪಡಿಸಿದ ಮತ್ತು ಬಿಡುಗಡೆಯಾದ ಪ್ರಕರಣಗಳ ಸಂಖ್ಯೆ ಈಗ ರಾಷ್ಟ್ರದಾದ್ಯಂತ 1,305 ರಷ್ಟಿದೆ ಎಂದು ಅಂಕಿ ಅಂಶ ತಿಳಿಸಿದೆ.

ದೇಶದ ಅತ್ಯಂತ ಹೆಚ್ಚು ಹಾನಿಯಾಗಿರುವ ಮಹಾರಾಷ್ಟ್ರದಲ್ಲಿ ಮಂಗಳವಾರ ಬೆಳಿಗ್ಗೆ ಮತ್ತೆ ಹೊಸ ಪ್ರಕರಣಗಳು ಕಂಡುಬಂದಿವೆ. ದೃಢಪಡಿಸಿದ ಪ್ರಕರಣಗಳ ಸಂಖ್ಯೆ 2,687ಕ್ಕೆ ಏರಿಕೆಯಾಗಿದ್ದು, ಹತ್ತು ಹೊಸ ಸಾವುಗಳು ಸಂಭವಿಸಿದೆ. ಇದರೊಂದಿಗೆ ಇಲ್ಲಿಯವರೆಗೆ ಸಾವಿನ ಸಂಖ್ಯೆ 170ಕ್ಕೆ ತಲುಪಿದೆ. ನಂತರ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಈಗ 1,561 ಪ್ರಕರಣಗಳು ದಾಖಲಾಗಿದ್ದು, ಇದುವರೆಗೆ 30 ಸಾವು ಸಂಭವಿಸಿದೆ.
  • Blogger Comments
  • Facebook Comments

0 comments:

Post a Comment

Item Reviewed: ಕೊವಿಡ್-19 : ದೇಶಾದ್ಯಂತ 170 ಜಿಲ್ಲೆಗಳು ಹಾಟ್ ಸ್ಪಾಟ್ ಎಂದು ಘೋಷಿಸಿದ ಕೇಂದ್ರ Rating: 5 Reviewed By: karavali Times
Scroll to Top