ಸತ್ತ ಮೇಲೆ ಪರಿಹಾರ ಕೊಡುವುದು ಸಾಧನೆಯಲ್ಲ, ಇರುವಾಗ ಬದುಕು ಕಲ್ಪಿಸುವುದು ಸರಕಾರದ ಕರ್ತವ್ಯ : ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ - Karavali Times ಸತ್ತ ಮೇಲೆ ಪರಿಹಾರ ಕೊಡುವುದು ಸಾಧನೆಯಲ್ಲ, ಇರುವಾಗ ಬದುಕು ಕಲ್ಪಿಸುವುದು ಸರಕಾರದ ಕರ್ತವ್ಯ : ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ - Karavali Times

728x90

10 May 2020

ಸತ್ತ ಮೇಲೆ ಪರಿಹಾರ ಕೊಡುವುದು ಸಾಧನೆಯಲ್ಲ, ಇರುವಾಗ ಬದುಕು ಕಲ್ಪಿಸುವುದು ಸರಕಾರದ ಕರ್ತವ್ಯ : ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಬೆಂಗಳೂರು (ಕರಾವಳಿ ಟೈಮ್ಸ್) : ಜನ ಸತ್ತ ಮೇಲೆ ಪರಿಹಾರ ಕೊಡುವುದು ಸಾಧನೆಯಲ್ಲ, ಇರುವಾಗಲೇ ಬದುಕು ಕಲ್ಪಿಸುವುದು ಸರಕಾರದ ಕರ್ತವ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಖಾರವಾಗಿ ಪ್ರತಿಕ್ರಯಿಸಿದ್ದಾರೆ.

ತಮ್ಮ ಬೆಂಗಳೂರು ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಮರಳಲಿಚ್ಛಿಸುವ ಕನ್ನಡಿಗರಿಗೆ ಸರಕಾರದಿಂದ ಅನ್ಯಾಯವಾಗಿದೆ. ಲಾಕ್‍ಡೌನ್ ಅವಧಿಯಲ್ಲಿ ದುಡಿಯುವ ಕೈಗಳಿಗೆ ಕೆಲಸ ಇಲ್ಲದೆ ಸರಕಾರ ಅಥವಾ ದಾನಿಗಳು ನೀಡುವ ದವಸ ಧಾನ್ಯಕ್ಕೆ ಕೈಯೊಡ್ಡಲು ಮನಸ್ಸು ಒಪ್ಪದ ಸಾವಿರಾರು ಸ್ವಾಭಿಮಾನಿ ಕಾರ್ಮಿಕರು ತಮ್ಮ ತಮ್ಮ ಊರಿಗೆ ಮರಳಲು ಉತ್ಸುಕರಾಗಿದ್ದು, ಇವರ ವಿಚಾರದಲ್ಲಿ ಸರಕಾರ ಮಾನವೀಯತೆಯಿಂದ ವರ್ತಿಸಬೇಕು ಎಂದಿದ್ದಾರೆ.

ಹೊರ ರಾಜ್ಯಗಳಲ್ಲಿ ಹೋಗಿ ದುಡಿಯುತ್ತಿರುವ ಲಕ್ಷಾಂತರ ಕನ್ನಡಿಗರ ಪೈಕಿ ಪ್ರಸ್ತುತ 91,077ಕ್ಕೂ ಹೆಚ್ಚು ಜನರು ರಾಜ್ಯಕ್ಕೆ ಮರಳಲು ಸೇವಾ ಸಿಂಧು ಪೆÇೀರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ. ಆದರೆ ಸರಕಾರ ಈವರೆಗೆ 706 ಜನರಿಗೆ ಅನುಮತಿ ನೀಡಿದೆ. ಇನ್ನೂ 51,241 ಕ್ಕೂ ಹೆಚ್ಚು ಅರ್ಜಿ ವಿಲೇವಾರಿ ಮಾಡದೆ ಸರಕಾರ ವಿಳಂಬ ಮಾಡುತ್ತಿದೆ. ಕೆಲವು ಅರ್ಜಿಗಳು ಜಿಲ್ಲಾಧಿಕಾರಿಗಳ ಬಳಿಯೇ ಇದೆ ಮತ್ತೆ ಕೆಲವು ನೋಡಲ್ ಅಧಿಕಾರಿಗಳ ಬಳಿ ಇವೆ ಎಂದವರು ಹೇಳಿದರು.
  • Blogger Comments
  • Facebook Comments

0 comments:

Post a Comment

Item Reviewed: ಸತ್ತ ಮೇಲೆ ಪರಿಹಾರ ಕೊಡುವುದು ಸಾಧನೆಯಲ್ಲ, ಇರುವಾಗ ಬದುಕು ಕಲ್ಪಿಸುವುದು ಸರಕಾರದ ಕರ್ತವ್ಯ : ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ Rating: 5 Reviewed By: karavali Times
Scroll to Top