ಪಡಿತರ ಅಕ್ಕಿ ಮಾರಾಟ ಮಾಡುವವರ ವಿರುದ್ದ ಕಠಿಣ ಕ್ರಮ : ಸಚಿವ ಗೋಪಾಲಯ್ಯ - Karavali Times ಪಡಿತರ ಅಕ್ಕಿ ಮಾರಾಟ ಮಾಡುವವರ ವಿರುದ್ದ ಕಠಿಣ ಕ್ರಮ : ಸಚಿವ ಗೋಪಾಲಯ್ಯ - Karavali Times

728x90

12 May 2020

ಪಡಿತರ ಅಕ್ಕಿ ಮಾರಾಟ ಮಾಡುವವರ ವಿರುದ್ದ ಕಠಿಣ ಕ್ರಮ : ಸಚಿವ ಗೋಪಾಲಯ್ಯಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯ ಮತ್ತು ಕೇಂದ್ರ ಸರಕಾರಗಳು ಪಡಿತರ ವಿತರಿಸುತ್ತಿರುವ ಆಹಾರ ಧಾನ್ಯಗಳನ್ನು ಅಕ್ರಮ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಆಹಾರ ಸಚಿವ ಗೋಪಾಲಯ್ಯ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಡವರಿಗೆ ನೀಡುತ್ತಿರುವ ಪಡಿತರ ವಿತರಣೆಯನ್ನು ಕೆಲವರು ದುರ್ಬಳಕೆ ಮಾಡಿಕೊಳ್ಳುತ್ತಿರುವ ದೂರು ಬಂದಿದೆ. ಸರಕಾರ ಉಚಿತವಾಗಿ ವಿತರಿಸುತ್ತಿರುವ ಅಕ್ಕಿಯನ್ನು ಕೆಜಿಗೆ 12 ರಿಂದ 15 ರೂಪಾಯಿಗಳಿಗೆ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಅವರು ಎಚ್ಚರಿಸಿದರು.

ಬಡವರಿಗೆ ಕೋಟ್ಯಂತರ ರೂಪಾಯಿ ವ್ಯಯ ಮಾಡಿ ಸರಕಾರ ಪಡಿತರ ಒದಗಿಸುತ್ತಿದೆ. ಆದರೆ ಇದನ್ನು ದುರ್ಬಳಕೆ ಮಾಡಿಕೊಳ್ಳುವುದು ತಪ್ಪು. ದುರ್ಬಳಕೆ ತಡೆಯಲು ಕಾನೂನು ಜಾರಿ ಮಾಡುವ ಸಂಬಂಧ ಮುಖ್ಯ ಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಅವರು ಹೇಳಿದರು.

ಪಡಿತರ ಬೇಡ ಎಂದರೆ ಅದನ್ನು ಅಂಗಡಿಯಲ್ಲೇ ಬಿಟ್ಟುಬಿಡಿ ಅದರಿಂದ ಬಡವರಿಗೆ ಅನುಕೂಲವಾಗುತ್ತದೆ. ಅದು ಬಿಟ್ಟು ಉಚಿತವಾಗಿ ಪಡಿತರ ಪಡೆದು ಅದನ್ನು ಮಾರಾಟ ಮಾಡುವುದು ಸರಿಯಲ್ಲ. ಇಂತಹವರ ಪಡಿತರ ಚೀಟಿಯನ್ನ ರದ್ದು ಮಾಡುವುದಾಗಿಯೂ ಅವರು ಎಚ್ಚರಿಸಿದರು.

ಪಡಿತರ ದುರ್ಬಳಕೆ ಮಾಡಿಕೊಂಡಿರುವ 499 ಅಂಗಡಿಗಳಿಗೆ ನೋಟಿಸ್ ನೀಡಲಾಗಿದೆ. 33 ಅಂಗಡಿಗಳ ಲೈಸೆನ್ಸ್ ರದ್ದು ಮಾಡಿದ್ದೇವೆ ಎಂದ ಸಚಿವರು ಗುಲ್ಬರ್ಗ, ಮೈಸೂರು ಮತ್ತು ದಾವಣಗೆರೆ ಖಾಸಗಿ ಗೋದಾಮುಗಳ ಮೇಲೆ ನಮ್ಮ ಇಲಾಖೆ ಅಧಿಕಾರಿಗಳು, ಮತ್ತು ಪೆÇಲೀಸರು ದಾಳಿ ನಡೆಸಿದ್ದು, ಸಾವಿರಾರು ಕ್ವಿಂಟಾಲ್ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಇದು ನಮ್ಮ ಸರಕಾರದ ಅಕ್ಕಿಯೋ ಇಥವಾ ಬೇರೆ ರಾಜ್ಯದ ಅಕ್ಕಿಯೋ ಎಂದು ತನಿಖೆ ನಡೆಸಿ ವರದಿ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ತಪ್ಪಿತಸ್ಥರು ಎಷ್ಟೇ ಪ್ರಭಾವಿಯಾಗಳಾಗಿದ್ದರೂ ಸುಮ್ಮನೆ ಬಿಡುವುದಿಲ್ಲ. ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಸಚಿವರು ಎಚ್ಚರಿಸಿದರು.
  • Blogger Comments
  • Facebook Comments

0 comments:

Post a Comment

Item Reviewed: ಪಡಿತರ ಅಕ್ಕಿ ಮಾರಾಟ ಮಾಡುವವರ ವಿರುದ್ದ ಕಠಿಣ ಕ್ರಮ : ಸಚಿವ ಗೋಪಾಲಯ್ಯ Rating: 5 Reviewed By: karavali Times
Scroll to Top