ಮುತ್ತಪ್ಪ ರೈ ಅಂತ್ಯಕ್ರಿಯೆ ವೇಳೆ ಗಾಳಿಯಲ್ಲಿ ಗುಂಡು : 7 ಮಂದಿ ದಸ್ತಗಿರಿ - Karavali Times ಮುತ್ತಪ್ಪ ರೈ ಅಂತ್ಯಕ್ರಿಯೆ ವೇಳೆ ಗಾಳಿಯಲ್ಲಿ ಗುಂಡು : 7 ಮಂದಿ ದಸ್ತಗಿರಿ - Karavali Times

728x90

15 May 2020

ಮುತ್ತಪ್ಪ ರೈ ಅಂತ್ಯಕ್ರಿಯೆ ವೇಳೆ ಗಾಳಿಯಲ್ಲಿ ಗುಂಡು : 7 ಮಂದಿ ದಸ್ತಗಿರಿ
ರಾಮನಗರ (ಕರಾವಳಿ ಟೈಮ್ಸ್) : ಭೂಗತ ಲೋಕದ ಮಾಜಿ ಡಾನ್, ಜಯ ಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ಅವರ ಅಂತ್ಯಕ್ರಿಯೆ ವೇಳೆ ಗೌರವಾರ್ಥ ಗಾಳಿಯಲ್ಲಿ ಗುಂಡು ಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಪೆÇಲೀಸರು 7 ಜನರನ್ನು ದಸ್ತಗಿರಿ ಮಾಡಿದ್ದಾರೆ.

    ಬಂಧಿತರನ್ನು ಮೋನಪ್ಪ, ಗಿರೀಶ್, ಲಕ್ವಿರ್ ಸಿಂಗ್, ಚಾತರ್ ಸಿಂಗ್, ರಂಜಿತ್ ರೈ, ಸುನಿಲ್ ಹಾಗೂ ಪ್ರಕಾಶ್ ರೈ ಎಂದು ಹೆಸರಿಸಲಾಗಿದೆ. ಗುಂಡು ಹಾರಿಸಲು ಬಳಸಿದ್ದ ಶಸ್ತ್ರಾಸ್ತ್ರಗಳನ್ನು ಪೆÇಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಸೆಕ್ಯುರಿಟಿಗಳು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಈ ಸಂದರ್ಭದಲ್ಲಿ ಆಯೋಜಕರು ಕಾನೂನು ಉಲ್ಲಂಘನೆ ತಡೆಗಟ್ಟುವಲ್ಲಿ ವಿಫಲರಾಗಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಬಿಡದಿ ಠಾಣೆಯಲ್ಲಿ ಆರ್ಮ್ಸ್ ಆಕ್ಟ್ ಅಡಿ ಪ್ರಕರಣ ದಾಖಲಾಗಿದ್ದು, ಇದರಲ್ಲಿ ಆಯೋಜಕ ಪ್ರಕಾಶ್ ರೈ ಸೇರಿ ಏಳು ಜನರನ್ನು ದಸ್ತಗಿರಿ ಪೊಲೀಸರು ದಸ್ತಗಿರಿ ಮಾಡಿದ್ದು, ಆರೋಪಿಗಳಿಂದ ಶಸ್ತ್ರಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಬಿಡದಿ ಪೆÇಲೀಸರು ತಿಳಿಸಿದ್ದಾರೆ.

    ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ (68) ಕ್ಯಾನ್ಸರ್‍ನಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗಿನ ಜಾವ ಸುಮಾರು 2:10ಕ್ಕೆ ಮೃತಪಟ್ಟಿದ್ದರು. ಅವರ ಮೃತ ಶರೀರದ ಅಂತ್ಯಕ್ರಿಯೆ ರಾಮನಗರ ಜಿಲ್ಲೆಯ ಬಿಡದಿಯ ತೋಟದ ಮನೆಯಲ್ಲಿ ಶುಕ್ರವಾರ ನಡೆದಿದೆ. ಅವರ ಕಿರಿ ಪುತ್ರ ರಿಕಿ ರೈ ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದಾರೆ. ಅಂತ್ಯ ಕ್ರಿಯೆ ವೇಳೆ ಮುತ್ತಪ್ಪ ರೈ ಬೆಂಬಲಿಗರು ಕುಶಾಲತೋಪಿನ ರೀತಿಯಲ್ಲಿ ಐದು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಲ್ಲಿಸಿದ್ದರು. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು.
  • Blogger Comments
  • Facebook Comments

0 comments:

Post a Comment

Item Reviewed: ಮುತ್ತಪ್ಪ ರೈ ಅಂತ್ಯಕ್ರಿಯೆ ವೇಳೆ ಗಾಳಿಯಲ್ಲಿ ಗುಂಡು : 7 ಮಂದಿ ದಸ್ತಗಿರಿ Rating: 5 Reviewed By: karavali Times
Scroll to Top