ಜುಲೈ 8ಕ್ಕೆ ಪಿಯುಪಿ ಫಲಿತಾಂಶ, ಅಂತ್ಯಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ : ಸಚಿವ ಸುರೇಶ್ ಕುಮಾರ್ - Karavali Times ಜುಲೈ 8ಕ್ಕೆ ಪಿಯುಪಿ ಫಲಿತಾಂಶ, ಅಂತ್ಯಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ : ಸಚಿವ ಸುರೇಶ್ ಕುಮಾರ್ - Karavali Times

728x90

29 May 2020

ಜುಲೈ 8ಕ್ಕೆ ಪಿಯುಪಿ ಫಲಿತಾಂಶ, ಅಂತ್ಯಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ : ಸಚಿವ ಸುರೇಶ್ ಕುಮಾರ್ಬೆಂಗಳೂರು (ಕರಾವಳಿ ಟೈಮ್ಸ್) : ಲಾಕ್'ಡೌನ್ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಪಿಯುಸಿ ಇಂಗ್ಲೀಷ್ ಭಾಷಾ ಪರೀಕ್ಷೆಯನ್ನು ಜೂನ್ 18ಕ್ಕೆ ನಡೆಸಿ, ಜುಲೈ 8ರ ಅಂದಾಜಿಗೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಿಳಿದ್ದಾರೆ.

ಇದೇ ವೇಳೆ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನೂ ಕೂಡ ಜುಲೈ ತಿಂಗಳ ಅಂತ್ಯದ ವೇಳೆ ಪ್ರಕಟಿಸುವುದಾಗಿ ತಿಳಿಸಿದ್ದಾರೆ.

ನಗರದಲ್ಲಿ ಡಿಡಿಪಿಐಗಳ ಸಭೆ ನಡೆಸಿದ ಅವರು, ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬಾರದು ಎಂದು ಕೆಲವರು ಹೈಕೋರ್ಟಿನಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಂಡಿದ್ದು, ಜೂನ್ 25ರಿಂದ ಜುಲೈ 4ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಸಲುವಾಗಿ ಪರೀಕ್ಷಾ ಕೊಠಡಿಯಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು 24 ರಿಂದ 18ಕ್ಕೆ ಇಳಿಸಲಾಗಿದೆ ಎಂದವರು ಇದೇ ವೇಳೆ ತಿಳಿಸಿದ್ದಾರೆ.

 ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಣ ಇಲಾಖೆಯ ಆದೇಶಗಳನ್ನು ಉಲ್ಲಂಘಿಸಿ ಶುಲ್ಕ ಹೆಚ್ಚಿಸುವ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಮಕ್ಕಳಿಗೆ ಆನ್ಲೈನ್ ತರಬೇತಿ ನೀಡುವ ಕುರಿತು ಈಗಾಗಲೇ ನಿಮ್ಹಾನ್ಸ್ ನಿರ್ದೇಶಕರಿಗೆ ಪತ್ರ ಬರೆದು ಸಲಹೆ ಕೇಳಲಾಗಿದೆ ಎಂದರು.
ಇದೇ ವೇಳೆ ಗ್ರಾಮೀಣ ಭಾಗದ ಮಕ್ಕಳು ಆನ್'ಲೈನ್ ತರಗತಿಯಲ್ಲಿ ಭಾಗವಹಿಸಲು ಸಾಧ್ಯವೇ ಎಂಬುದರ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಚರ್ಚೆ ನಡೆಸಿ, ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. 
  • Blogger Comments
  • Facebook Comments

0 comments:

Post a Comment

Item Reviewed: ಜುಲೈ 8ಕ್ಕೆ ಪಿಯುಪಿ ಫಲಿತಾಂಶ, ಅಂತ್ಯಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ : ಸಚಿವ ಸುರೇಶ್ ಕುಮಾರ್ Rating: 5 Reviewed By: karavali Times
Scroll to Top