ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದ ಪರೀಕ್ಷಾ ಮಂಡಳಿ - Karavali Times ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದ ಪರೀಕ್ಷಾ ಮಂಡಳಿ - Karavali Times

728x90

19 May 2020

ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದ ಪರೀಕ್ಷಾ ಮಂಡಳಿ



ಬೆಂಗಳೂರು (ಕರಾವಳಿ ಟೈಮ್ಸ್) : ಎಸ್ಸೆಸ್ಸೆಲ್ಸಿ ಪರೀಕ್ಷಾ ದಿನಾಂಕ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ ಮರುದಿನವೇ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಂಗಳವಾರ ಹೊಸ ವೇಳಾಪಟ್ಟಿ ಪ್ರಕಟಿಸಿದೆ.

 ಜೂನ್ 25ರಿಂದ ಜುಲೈ 4ರವರೆಗೆ ಪರೀಕ್ಷೆಗಳು ನಡೆಯಲಿವೆ.
ನಿನ್ನೆಯಷ್ಟೇ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್​ ಅವರು, ಜೂನ್ 25 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಲಿದೆ ಮತ್ತು ಜೂನ್ 18ಕ್ಕೆ ಪಿಯುಸಿಯ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ ಎಂದು  ಹೇಳಿದ್ದರು.

ಇಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದೆ.

ಜೂನ್ 25  ಗುರುವಾರ : ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ - ಬೆಳಗ್ಗೆ- 10.30ರಿಂದ ಮಧ್ಯಾಹ್ನ 1.30ರವರೆಗೆ

ಜೂನ್ 26 ಶುಕ್ರವಾರ : ಕೋರ್ ಸಬ್ಜೆಕ್​- ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಆ್ಯಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಟು (ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45), ಇಂಜಿನಿಯರಿಂಗ್ ಗ್ರಾಫಿಕ್ಸ್ ಟು (ಮಧ್ಯಾಹ್ನ 2ರಿಂದ ಸಂಜೆ 5.15ರವರೆಗೆ), ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ (ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45), ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ - ಬೆಳಗ್ಗೆ 10.30ರಿಂದ 1.45

ಜೂನ್ 27 ಶನಿವಾರ : ಗಣಿತ, ಸಮಾಜಶಾಸ್ತ್ರ, - ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45

ಜೂನ್ 29 ಸೋಮವಾರ : ವಿಜ್ಞಾನ, ರಾಜ್ಯಶಾಸ್ತ್ರ (ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45) ಕರ್ನಾಟಕ ಹಿಂದೂಸ್ತಾನಿ ಸಂಗೀತ (ಮಧ್ಯಾಹ್ನ 2ರಿಂದ ಸಂಜೆ 5.15)

ಜುಲೈ 1 ಬುಧವಾರ : ಸಮಾಜ ವಿಜ್ಞಾನ - ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45

ಜುಲೈ 2  ಗುರುವಾರ : ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ - ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45

ಜುಲೈ 3 : ಶುಕ್ರವಾರ ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲಿಷ್, ಆರೇಬಿಕ್, ಪರ್ಶಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು - ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30

ಜುಲೈ 4 : ಜೆಟಿಎಸ್ (JTS) ಅಭ್ಯರ್ಥಿಗಳಿಗೆ ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆ

ಕೊರೋನಾ ವೈರಸ್​ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಪ್ರತಿ ಅಭ್ಯರ್ಥಿಯನ್ನು ಥರ್ಮಲ್ ಸ್ಕ್ಯಾನಿಂಗ್​ಗೆ ಒಳಪಡಿಸುವುದು, ಕೈಗಳನ್ನು ಸ್ಯಾನಿಟೈಸರ್​ನಿಂದ ಶುದ್ಧಿಕರಿಸುವುದು ಹಾಗೂ ಪ್ರತಿ ವಿದ್ಯಾರ್ಥಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷಾರ್ಥಿಗಳು ಬೆಳಗ್ಗೆ 9.30ಕ್ಕೆ ಅಂದರೆ ಪರೀಕ್ಷೆ ಆರಂಭಕ್ಕೂ ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಬೇಕು ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.
  • Blogger Comments
  • Facebook Comments

0 comments:

Post a Comment

Item Reviewed: ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದ ಪರೀಕ್ಷಾ ಮಂಡಳಿ Rating: 5 Reviewed By: karavali Times
Scroll to Top