ಬಂಟ್ವಾಳ (ಕರಾವಳಿ ಟೈಮ್ಸ್) : ಇಲ್ಲಿನ ಪುರಸಭಾ ಮಾಜಿ ಅಧ್ಯಕ್ಷೆ ಹಾಗೂ ಬಿ.ಜೆ.ಪಿ ಪಕ್ಷದ ಹಿರಿಯ ಕಾರ್ಯಕರ್ತೆಯಾಗಿದ್ದ ಬಿ. ಯಶೋಧ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ಬಿಜೆಪಿ ಪಕ್ಷದ ವತಿಯಿಂದ ಪಕ್ಷದ ಕಛೇರಿಯಲ್ಲಿ ಶ್ರದ್ಧಾಂಜಲಿ ಸಭೆ ಶನಿವಾರ ನಡೆಯಿತು.
ಕ್ಷೇತ್ರಾಧ್ಯಕ್ಷರಾದ ದೇವಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಬುಡಾ ಅಧ್ಯಕ್ಷ ಬಿ. ದೇವದಾಸ ಶೆಟ್ಟಿ ಯಶೋಧ ಅವರ ಕಾರ್ಯ ವೈಖರಿಯ ಬಗ್ಗೆ ಮತ್ತು ಪಕ್ಷದ ಸಂಬಂಧದ ಬಗ್ಗೆ ತಿಳಿಸಿ ನುಡಿ ನಮನ ಸಲ್ಲಿಸಿದರು. ಸಭೆಯಲ್ಲಿ ಕ್ಷೇತ್ರದ ಶಾಸಕ ಯು ರಾಜೇಶ್ ನಾಯ್ಕ್, ಪ್ರಮುಖರಾದ ಸುಲೋಚನ ಜಿ.ಕೆ. ಭಟ್, ರವೀಂದ್ರ ಕಂಬಳಿ, ಚಿದಾನಂದ ರೈ, ರೋನಾಲ್ಡ್ ಡಿ’ಸೋಜ, ರಮಾನಾಥ ರಾಯಿ, ಸೀತಾರಾಮ ಪೂಜಾರಿ, ಪುರುಷೋತ್ತಮ ಶೆಟ್ಟಿ ಮೊದಲಾದವರು ಭಾಗವಹಿಸಿದ್ದರು. ಕ್ಷೇತ್ರ ಉಪಾಧ್ಯಕ್ಷ ವಜ್ರನಾಥ ಕಲ್ಲಡ್ಕ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ರವೀಶ ಶೆಟ್ಟಿ ವಂದಿಸಿದರು.
0 comments:
Post a Comment