ಬಂಟ್ವಾಳ (ಕರಾವಳಿ ಟೈಮ್ಸ್) : ಕೊರೋನಾ ಲಾಕ್‍ಡೌನ್ ಸಂಕಷ್ಟ ಎದುರಿಸುತ್ತಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿ ಪೋಷಕರ ಕಷ್ಟಗಳಿಗೆ ಸ್ಪಂದಿಸುವ ಉದ್ದೇಶದಿಂದ ರಾಷ್ಟ್ರೀಕೃತ ಬ್ಯಾಂಕುಗಳಿಂದ ಪಡೆದ ಶೈಕ್ಷಣಿಕ ಸಾಲಗಳ ಮೊತ್ತಗಳ ಮೇಲಿನ ಒಂದು ವರ್ಷದ ಬಡ್ಡಿಯನ್ನು ಮನ್ನಾ ಮಾಡುವುದರ ಜೊತೆಗೆ ಸಾಲದ ಕಂತುಗಳನ್ನು ಕಟ್ಟಲು ಅವಧಿ ವಿಸ್ತರಿಸಿ ನೀಡುವಂತೆ ಬ್ಯಾಂಕ್‍ಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ರಾಜ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಕೊರೋನಾ ವೈರಸ್ ಹಾಗೂ ಲಾಕ್‍ಡೌನ್ ಕಾರಣದಿಂದಾಗಿ ಈಗಾಗಲೇ ವಿದ್ಯಾಭ್ಯಾಸ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳು ಸೂಕ್ತ ಉದ್ಯೋಗವಿಲ್ಲದೆ ಅಲೆದಾಟ ನಡೆಸುವ ಪರಿಸ್ಥಿತಿ ಉಂಟಾಗಿದೆ. ಪೋಷಕರು ಈ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲದ ಮೇಲಿನ ಬಡ್ಡಿ ಹಾಗೂ ಕಂತುಗಳನ್ನು ಬ್ಯಾಂಕುಗಳಿಗೆ ಪಾವತಿಸುವ ಸ್ಥಿತಿಯಲ್ಲಿಲ್ಲ. ಈ ಕಾರಣದಿಂದ ಸರಕಾರ ಸೂಕ್ತ ಸಮಯದಲ್ಲಿ ಎಚ್ಚೆತ್ತುಕೊಂಡು ವಿದ್ಯಾರ್ಥಿಗಳ ಹಾಗೂ ಪೋಷಕರ ಹಿತದೃಷ್ಟಿಯಿಂದ ಶೈಕ್ಷಣಿಕ ಸಾಲದ ಮೇಲಿನ ಬಡ್ಡಿ ಹಾಗೂ ಕಂತುಗಳ ಬಗ್ಗೆ ಬ್ಯಾಂಕುಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಬೇಬಿ ಕುಂದರ್ ಮುಖ್ಯಮಂತ್ರಿ ಹಾಗೂ ಕೇಂದ್ರ ವಿತ್ತ ಸಚಿವರಿಗೆ ಆಗ್ರಹಿಸಿದ್ದಾರೆ.
0 comments:
Post a Comment