ಚೆನ್ನಾವರ (ಕರಾವಳಿ ಟೈಮ್ಸ್) : ಕರ್ನಾಟಕ ಎಸ್ಸೆಸ್ಸೆಫ್ ರಾಜ್ಯ ಸಮಿತಿಯು ಜೂನ್ 5 ರಂದು ‘ನಾಳೆಗೊಂದು ನೆರಳು’ ಎಂಬ ಧ್ಯೇಯ ವಾಕ್ಯದೊಂದಿಗೆ ಪರಿಸರ ದಿನಾಚರಣೆಯ ಸುತ್ತೋಲೆ ಹೊರಡಿಸಿದ ಪ್ರಕಾರ ಚೆನ್ನಾವರ ಎಸ್.ವೈ.ಎಸ್. ಹಾಗೂ ಎಸ್ಸೆಸ್ಸೆಫ್ ವತಿಯಿಂದ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯ್ತು.
ಹಾಫಿಳ್ ಅಬ್ದುಸ್ಸಲಾಮ್ ನಿಝಾಮಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಸ್.ವೈ.ಎಸ್. ಅಧ್ಯಕ್ಷ ಇಸ್ಮಾಈಲ್ ಸಅದಿ, ಯೂಸುಫ್ ಹಾಜಿ, ಮುತ್ತಲಿಬ್ ಹಾಜಿ, ಜಿಸಿಸಿ ಜಮಾಅತ್ ಸಮಿತಿ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಮದನಿ, ಎಸ್ಸೆಸ್ಸೆಫ್ ಉಪಾಧ್ಯಕ್ಷ ನಿಝಾರ್ ಮುಸ್ಲಿಯಾರ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಬಾಸಿತ್, ಇಸ್ಮಾಈಲ್ ಅನ್ವರ್ ಮೊದಲಾದವರು ಭಾಗವಹಿಸಿದ್ದರು.
0 comments:
Post a Comment