ಪೊಲೀಸರ ಕ್ವಾರಂಟೈನ್ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಿ : ಡಿಜಿಪಿ ಸೂದ್ ಆದೇಶ - Karavali Times ಪೊಲೀಸರ ಕ್ವಾರಂಟೈನ್ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಿ : ಡಿಜಿಪಿ ಸೂದ್ ಆದೇಶ - Karavali Times

728x90

9 June 2020

ಪೊಲೀಸರ ಕ್ವಾರಂಟೈನ್ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಿ : ಡಿಜಿಪಿ ಸೂದ್ ಆದೇಶ



ಬೆಂಗಳೂರು (ಕರಾವಳಿ ಟೈಮ್ಸ್) : ಕೊರೊನಾ ಭೀತಿ ಹಿನ್ನೆಲೆಯಲ್ಲಿ ಇನ್ನು ಮುಂದೆ ಪೊಲೀಸರು ಕ್ವಾರಂಟೈನ್‍ನಲ್ಲಿದ್ದರೆ ಅದು ಕರ್ತವ್ಯದ ಅವಧಿ ಎಂದು ಪರಿಗಣಿಸಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿರುವ ಹಿನ್ನಲೆಯಲ್ಲಿ ದಿನಂಪ್ರತಿ ಸಾರ್ವಜನಿಕರ ಜೊತೆಗೆ ಪೊಲೀಸರು ನೇರ ಸಂಪರ್ಕದಲ್ಲಿರುತ್ತಾರೆ. ಹೀಗಾಗಿ ಇತ್ತೀಚೆಗೆ ಪೊಲೀಸರಲ್ಲೂ ಕೊರೊನಾ ಸೋಂಕು ಕಂಡು ಬರುತ್ತಿದ್ದು, ಸೋಂಕಿತರ ಜೊತೆ ಸಂಪರ್ಕ ಹೊಂದಿದ ಹಲವಾರು ಪೊಲೀಸರು ಕರ್ತವ್ಯ ನಿರ್ವಹಣೆ ಸಮಯದಲ್ಲಿ ಹೋಂ ಕ್ವಾರಂಟೈನ್ ಅಥವಾ ಸಾಂಸ್ಥಿಕ ಕ್ವಾರಂಟೈನ್‍ಗೆ ಒಳಪಡುತ್ತಿದ್ದಾರೆ. ಹೀಗಾಗಿ ಕ್ವಾರಂಟೈನ್ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಬೇಕು ಎಂದು ಡಿಜಿಪಿ ಸೂಚಿಸಿದ್ದಾರೆ.

ಕೊರೋನಾ ಸೋಂಕಿತರ ಪ್ರಾಥಮಿಕ, ದ್ವಿತೀಯ ಸಂಪರ್ಕ ಹೊಂದಿದವರು ಹಾಗೂ ತರಬೇತಿ ನಿಮಿತ್ತ ಹೊರ ರಾಜ್ಯದಿಂದ ಪ್ರಯಾಣ ಬೆಳೆಸಿದ ಸಿಬ್ಬಂದಿಗೂ ಈ ನಿಯಮ ಅನ್ವಯವಾಗಲಿದೆ ಎಂದು ಡಿಜಿಪಿ ಸೂದ್ ಸ್ಪಷ್ಟಪಡಿಸಿದ್ದಾರೆ.
  • Blogger Comments
  • Facebook Comments

0 comments:

Post a Comment

Item Reviewed: ಪೊಲೀಸರ ಕ್ವಾರಂಟೈನ್ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಿ : ಡಿಜಿಪಿ ಸೂದ್ ಆದೇಶ Rating: 5 Reviewed By: karavali Times
Scroll to Top