ಬಂಟ್ವಾಳ (ಕರಾವಳಿ ಟೈಮ್ಸ್) : ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಸಂಸ್ಥೆಯ ಅಧ್ಯಕ್ಷರಾಗಿ ರಾಜ್ಯ ಸರಕಾರದಿಂದ ನೇಮಕವಾದ ಹರಿಕೃಷ್ಣ ಬಂಟ್ವಾಳ ಅವರು ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಅವರ ಕಛೇರಿಗೆ ಶನಿವಾರ ಭೇಟಿ ನೀಡಿದರು.
ಈ ಸಂದರ್ಭ ಶಾಸಕರು ಹರಿಕೃಷ್ಣ ಅವರಿಗೆ ಹೂ ಹಾರ ಹಾಕಿ ಶಾಲು ಹೊದಿಸಿ ಅಭಿನಂದಿಸಿದರು. ಇದೇ ವೇಳೆ ಮಾತನಾಡಿದ ಶಾಸಕ ನಾಯಕ್, ಹರಿಕೃಷ್ಣ ಬಂಟ್ವಾಳ ಅವರು ಹಿರಿಯ ರಾಜಕಾರಣಿಯಾಗಿದ್ದು, ರಾಜಕೀಯ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಕೆಲಸ ಮಾಡಿ ಪ್ರಸ್ತುತ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಸಂಸ್ಥೆಯ ಅಧ್ಯಕ್ಷರಾಗಿ ನೇಮಕವಾಗಿದ್ದು ಸಂತೋಷದ ವಿಚಾರ. ಇವರು ಇನ್ನಷ್ಟು ಅಭಿವೃದ್ಧಿಯ ಕೆಲಸವನ್ನು ವಿದ್ಯುನ್ಮಾನ ನಿಗಮದಲ್ಲಿ ಮಾಡಲಿ ಎಂದು ಶುಭ ಹಾರೈಸುತ್ತೇನೆ. ಇವರ ನೇಮಕಕ್ಕೆ ಸಹಕರಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮತ್ತು ಬಿಜೆಪಿ ರಾಜಾಧ್ಯಕ್ಷರು ಹಾಗೂ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.
ಈ ಸಂಧರ್ಭ ಬುಡಾ ಅದ್ಯಕ್ಷ ಬಿ. ದೇವದಾಸ್ ಶೆಟ್ಟಿ, ಪ್ರಮುಖರಾದ ಸೀತಾರಾಮ ಪೂಜಾರಿ, ರಮಾನಾಥ ರಾಯಿ, ಮನೋಜ್ ಕಳ್ಳಿಗೆ, ಪುಷ್ಪರಾಜ್ ಚೌಟ, ಶ್ರೀಕಾಂತ್ ಶೆಟ್ಟಿ, ಪ್ರವೀಣ್ ಗಟ್ಟಿ, ಯಶವಂತ ನಾಯ್ಕ ನಗ್ರಿ, ಪುರುಷೋತ್ತಮ, ನಿತ್ಯ ಪ್ರಕಾಶ್ ಬಂಟ್ವಾಳ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment