ನಿಸರ್ಗ ಚಂಡಮಾರುತ : ಕರ್ನಾಟಕದಲ್ಲೂ ಆತಂಕ, ದ.ಕ. ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಣೆ - Karavali Times ನಿಸರ್ಗ ಚಂಡಮಾರುತ : ಕರ್ನಾಟಕದಲ್ಲೂ ಆತಂಕ, ದ.ಕ. ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಣೆ - Karavali Times

728x90

2 June 2020

ನಿಸರ್ಗ ಚಂಡಮಾರುತ : ಕರ್ನಾಟಕದಲ್ಲೂ ಆತಂಕ, ದ.ಕ. ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಣೆಬೆಂಗಳೂರು (ಕರಾವಳಿ ಟೈಮ್ಸ್) : ಮಹಾರಾಷ್ಟ್ರ, ಗುಜರಾತ್ ರಾಜ್ಯಗಳಿಗೆ ಬುಧವಾರ ನಿಸರ್ಗ ಚಂಡಮಾರುತ ಆಪ್ಪಳಿಸುವ ಭೀತಿ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿಯಲ್ಲೂ ಆತಂಕ ಎದುರಾಗಿದೆ.

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದ್ದು, ರಕ್ಕಸ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮಂಗಳವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಭಟ್ಕಳ, ಹೊನ್ನಾವರ, ಕುಮಟಾ, ಕಾರವಾರದಲ್ಲಿ ಬೆಳಿಗ್ಗೆಯಿಂದಲೇ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. 50-60 ಕಿಮೀ  ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಗಳಿದ್ದು, 2.6 ರಿಂದ 3.8 ಕಿಮೀ ಎತ್ತರದವರೆಗೆ ಅಲೆಗಳು ಏಳುವ ನಿರೀಕ್ಷೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಬೆಳಗ್ಗಿನಿಂದಲೇ ಇಡೀ ದಿನ ನಿರಂತರ ತುಂತುರು ಮಳೆಯಾಗಿದೆ. ಜಿಲ್ಲೆಯ ಪುತ್ತೂರು, ಬೆಳ್ತಂಗಡಿ ಮತ್ತು ಸುಳ್ಯ ಭಾಗಗಳಲ್ಲಿ ನದಿಗಳ ಹರಿವು ಹೆಚ್ಚಲವಾಗಿದೆ. ನೇತ್ರಾವತಿ, ಕುಮಾರಧಾರ ನದಿಗಳಲ್ಲಿ ನೀರಿನ ಪ್ರಮಾಣದಲ್ಲಿ ಅಲ್ಪಪ್ರಮಾಣದಲ್ಲಿ ಹೆಚ್ಚಳವಾಗಿದೆ. ಇನ್ನು ಕೊಡಗಿನಲ್ಲೂ ಸಾಧಾರಣ ಮಳೆಯಾಗಿದೆ.
  • Blogger Comments
  • Facebook Comments

0 comments:

Post a Comment

Item Reviewed: ನಿಸರ್ಗ ಚಂಡಮಾರುತ : ಕರ್ನಾಟಕದಲ್ಲೂ ಆತಂಕ, ದ.ಕ. ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಣೆ Rating: 5 Reviewed By: karavali Times
Scroll to Top