ಅವಧಿ ಪೂರ್ಣಗೊಂಡ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಿಸಲು ಸರಕಾರ ಆದೇಶ - Karavali Times ಅವಧಿ ಪೂರ್ಣಗೊಂಡ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಿಸಲು ಸರಕಾರ ಆದೇಶ - Karavali Times

728x90

17 June 2020

ಅವಧಿ ಪೂರ್ಣಗೊಂಡ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಿಸಲು ಸರಕಾರ ಆದೇಶಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯ ಸಚಿವ ಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಬುಧವಾರ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದೆ.

ರಾಜ್ಯದ ಬಹುತೇಕ ಗ್ರಾಮ ಪಂಚಾಯತಿಗಳ 5 ವರ್ಷಗಳ ಅವಧಿ 2020 ರ ಜನವರಿಯಿಂದ ಆರಂಭವಾಗಿ ವಿವಿಧ ದಿನಾಂಕಗಳಂದು ಪೂರ್ಣಗೊಳ್ಳುತ್ತದೆ. ಈ ಬಾರಿ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಗಳು ನಡೆಯದಿರುವ ಹಿನ್ನಲೆಯಲ್ಲಿ, 5 ವರ್ಷಗಳ ಅವಧಿಯನ್ನು ಮುಗಿಸಿದ ನಂತರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದಂತೆ ಆಡಳಿತಾಧಿಕಾರಿಗಳನ್ನು ನೇಮಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಸುವವರೆಗೂ ಆಡಳಿತಾಧಿಕಾರಿಗಳನ್ನು ನೇಮಿಸಲು ಇತ್ತೀಚಿಗೆ ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿತ್ತು.


  • Blogger Comments
  • Facebook Comments

0 comments:

Post a Comment

Item Reviewed: ಅವಧಿ ಪೂರ್ಣಗೊಂಡ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಿಸಲು ಸರಕಾರ ಆದೇಶ Rating: 5 Reviewed By: karavali Times
Scroll to Top