ಬಂಟ್ವಾಳ (ಕರಾವಳಿ ಟೈಮ್ಸ್) : ತಾಲೂಕಿನ ಸಂಗಬೆಟ್ಟು ಗ್ರಾಮದ ನಿವಾಸಿ ಸಹೋದರ-ಸಹೋದರಿ ಇಬ್ಬರೂ ಸೋಮವರ ರಾತ್ರಿ ಮನೆಯಲ್ಲೇ ಪೆಟ್ರೋಲ್ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇಲ್ಲಿನ ನಿವಾಸಿಗಳಾದ ನೀಲಯ್ಯ ಶೆಟ್ಟಿಗಾರ್ (42) ಹಾಗೂ ಅವರ ಸಹೋದರಿ ಕೇಸರಿ (39) ಆತ್ಮಹತ್ಯೆ ಮಾಡಿಕೊಂಡವರು. ಇವರಿಬ್ಬರೂ ಹಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಅವರು ತಮ್ಮ ಮನೆಯ ಕೋಣೆಯೊಳಗೆ ಸ್ವತಃ ತಾವೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ನೀಲಯ್ಯ ಅವರ ಸಹೋದರಿ ಮತ್ತು ಅವರ ಪತ್ನಿ ಒಂದೇ ಮನೆಯಲ್ಲಿ ವಾಸಿಸುತ್ತಿದ್ದಾರೆ. ಅವರು ಇನ್ನೊಂದು ಕೋಣೆಯಲ್ಲಿ ಮಲಗಿದ್ದರು. ಬೆಂಕಿ ಜ್ವಾಲೆ ಹೆಚ್ಚಾಗಿ ಇಬ್ಬರೂ ಕೂಗಿಕೊಳ್ಳುತ್ತಿದ್ದ ವೇಳೆ ಅವರು ನೆರವಿಗೆ ಧಾವಿಸಿದ್ದಾರೆ. ಸ್ಥಳೀಯರ ಸಹಾಯದಿಂದ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲೇ ಇಬ್ಬರೂ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಈ ಹಿಂದೆ ನೀಲಯ್ಯ ಕೈಮಗ್ಗ ಕೆಲಸ ನಿರ್ವಹಿಸಿಕೊಂಡಿದ್ದು, ಬಳಿಕ ಅನಾರೋಗ್ಯದ ಕಾರಣ ಅದನ್ನು ನಿಲ್ಲಿಸಿದ್ದರು ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣಾ ಎಸ್ಸೈ ಪ್ರಸನ್ನ ನೇತೃತ್ವದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
0 comments:
Post a Comment