ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ, ತಾಯಿ ಮಾಧವಿ ಸಿಂಧ್ಯಾಗೆ ಕೊರೋನಾ ಪಾಸಿಟಿವ್ ದೃಢ - Karavali Times ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ, ತಾಯಿ ಮಾಧವಿ ಸಿಂಧ್ಯಾಗೆ ಕೊರೋನಾ ಪಾಸಿಟಿವ್ ದೃಢ - Karavali Times

728x90

9 June 2020

ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ, ತಾಯಿ ಮಾಧವಿ ಸಿಂಧ್ಯಾಗೆ ಕೊರೋನಾ ಪಾಸಿಟಿವ್ ದೃಢನವದೆಹಲಿ (ಕರಾವಳಿ ಟೈಮ್ಸ್) : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಅವರ ತಾಯಿ ಮಾಧವಿ ರಾಜೆ ಸಿಂಧಿಯಾ ಅವರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ.

ಕೊರೋನಾ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಸಿಂಧಿಯಾ ಹಾಗೂ ಅವರ ತಾಯಿಯನ್ನು ಕೊವಿಡ್-19 ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವ್ ವರದಿ ಬಂದಿದೆ ಎಂದು ವರದಿಗಳು ತಿಳಿಸಿವೆ. ಪಾಸಿಟಿವ್ ಬಂದ ನಂತರ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಅವರ ತಾಯಿಯನ್ನು ದೆಹಲಿಯ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಮಧ್ಯೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೂ ಕೊರೋನಾ ಲಕ್ಷಣಗಳು ಕಾಣಿಸಿಕೊಂಡಿದ್ದು, ಅವರನ್ನು ಕೊವಿಡ್-19 ಪರೀಕ್ಷೆಗೆ ಒಳಪಡಿಸಲಾಗಿದೆ. ಆದರೆ ವರದಿ ಇನ್ನೂ ಬಂದಿಲ್ಲ.
  • Blogger Comments
  • Facebook Comments

0 comments:

Post a Comment

Item Reviewed: ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ, ತಾಯಿ ಮಾಧವಿ ಸಿಂಧ್ಯಾಗೆ ಕೊರೋನಾ ಪಾಸಿಟಿವ್ ದೃಢ Rating: 5 Reviewed By: karavali Times
Scroll to Top