ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲೂ ಕೊರೋನಾ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಿ : ಸರಕಾರಕ್ಕೆ ಸಿದ್ದರಾಮಯ್ಯ ಆಗ್ರಹ - Karavali Times ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲೂ ಕೊರೋನಾ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಿ : ಸರಕಾರಕ್ಕೆ ಸಿದ್ದರಾಮಯ್ಯ ಆಗ್ರಹ - Karavali Times

728x90

23 June 2020

ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲೂ ಕೊರೋನಾ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಿ : ಸರಕಾರಕ್ಕೆ ಸಿದ್ದರಾಮಯ್ಯ ಆಗ್ರಹ



ಜವಾಬ್ದಾರಿಯುತ ಸರಕಾರ ಜನವಿರೋಧಿಯಾಗುತ್ತಿರುವ ಬಗ್ಗೆ ಸಿದ್ದು ಕೆಂಡಾಮಂಡಲ

ಸಿಎಂ ಮಮಕಾರ ಸೋಂಕಿತರೊಗೋ ಅಥವಾ ಖಾಸಗಿ ಆಸ್ಪತ್ರೆಗಳಿಗೋ?


ಬೆಂಗಳೂರು (ಕರಾವಳಿ ಟೈಮ್ಸ್) : ಕೊರೋನಾ ಚಿಕಿತ್ಸೆಗೆ ಖಾಸಗಿ ಆಸ್ಪತ್ರಗಳಲ್ಲಿ ದರ ನಿಗದಿ ಮಾಡಿರುವ ರಾಜ್ಯ ಸರಕಾರದ ನಿರ್ಧಾರಕ್ಕೆ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯ ಎಲ್ಲಾ ಆಸ್ಪತ್ರೆಗಳಲ್ಲೂ ಸೋಂಕಿತರಿಕೆ ಉಚಿತ ಚಿಕಿತ್ಸೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಖಾಸಗಿ ಆಸ್ಪತ್ರೆಗಳಲ್ಲಿ ಕೊರನಾ ಚಿಕಿತ್ಸೆಗಾಗಿ ರಾಜ್ಯ ಸರಕಾರ ನಿಗದಿಪಡಿಸಿರುವ ವೆಚ್ಚದ ವಿವರ ಸೋಂಕಿತರಿಗೆ ಹೃದಯಾಘಾತವಾಗುವಂತಿದೆ. ಒಂದು ಜವಾಬ್ದಾರಿಯುತ ಸರಕಾರ ತನ್ನೆಲ್ಲಾ ಸೂಕ್ಷ್ಮತೆಯನ್ನು ಕಳೆದುಕೊಂಡು ಇಷ್ಟೊಂದು ಅಮಾನವೀಯ, ಇಷ್ಟೊಂದು ಜನವಿರೋಧಿಯಾಗಲು ಹೇಗೆ ಸಾಧ್ಯ ಎಂದವರು ಬೇಸರ ವ್ಯಕ್ತಪಡಿಸಿದ್ದಾರೆ.

ಕೊರೋನಾ ನಿಯಂತ್ರಿಸಲು ಸಂಪೂರ್ಣ ವಿಫಲವಾಗಿರುವ ರಾಜ್ಯ ಮತ್ತು ಕೇಂದ್ರ ಸರಕಾರಗಳು ತಮ್ಮ ವೈಫಲ್ಯಗಳನ್ನು ಮುಚ್ಚಿಹಾಕಲು ತಾವು ನಿರ್ವಹಿಸಬೇಕಾಗಿರುವ ಜವಾಬ್ದಾರಿಯನ್ನು ಖಾಸಗಿಯವರ ಹೆಗಲಿಗೆ ವರ್ಗಾಯಿಸಲು ಹೊರಟಿವೆ. ಈ ಮೂಲಕ ಬಡ-ಅಸಹಾಯಕ ಜನರನ್ನು ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬಲಿಪಶು ಮಾಡಲು ನಿರ್ಧರಿಸಿದೆ ಎಂದು ಸಿದ್ದು ಸರಕಾರದ ವಿರುದ್ದ ಕೆಂಡಾಮಂಡಲರಾಗಿದ್ದಾರೆ.

ಕೊರೋನಾ ಸೋಂಕಿತನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ನಿಗದಿಪಡಿಸಿರುವ ಚಿಕಿತ್ಸಾ ಶುಲ್ಕವನ್ನು ಕಣ್ಣುಮುಚ್ಚಿ ಅನುಮೋದಿಸಿ ಜಾರಿಗೆ ತರಲು ಹೊರಟಿರುವ ರಾಜ್ಯ ಸರಕಾರ ಖಾಸಗಿ ಆಸ್ಪತ್ರೆಗಳ ಲಾಬಿಗೆ ಮಣಿದಂತಿದೆ. ಸಿಎಂ ಯಡಿಯೂರಪ್ಪ ನೆರವಾಗಲು ಹೊರಟಿರುವುದು ಸೋಂಕಿತರಿಗೋ ಅಥವಾ ಖಾಸಗಿ ಆಸ್ಪತ್ರೆಗಳಿಗೋ ಎಂದವರು ಪ್ರಶ್ನಿಸಿದ್ದಾರೆ.

ಕೊರೋನಾ ರೋಗಿಗಳಿಗೆ ಎಲ್ಲಾ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಬೇಕು. ಜೊತೆಗೆ ಸ್ಟಾಂಡರ್ಡ್ ಟ್ರೀಟ್ಮೆಂಟ್ ಪೆÇ್ರಟೋಕಾಲ್ ಜಾರಿಗೆ ತರಬೇಕು ಹಾಗೂ ಆಸ್ಪತ್ರೆಗಳಲ್ಲಿ ಸ್ಟಾಂಡರ್ಡ್ ಟ್ರೀಟ್ಮೆಂಟ್ ಪೆÇ್ರಟೋಕಾಲ್ ಜಾರಿಯಾಗುತ್ತಿರುವ ಬಗ್ಗೆ ನಿಗಾವಹಿಸಲು ಸಮಿತಿಯನ್ನೂ ರಚನೆ ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.








  • Blogger Comments
  • Facebook Comments

0 comments:

Post a Comment

Item Reviewed: ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲೂ ಕೊರೋನಾ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಿ : ಸರಕಾರಕ್ಕೆ ಸಿದ್ದರಾಮಯ್ಯ ಆಗ್ರಹ Rating: 5 Reviewed By: karavali Times
Scroll to Top