ಅಂತರಾಷ್ಟ್ರೀಯ ವಿಮಾನ ಹಾರಾಟ ಆಗಸ್ಟ್ 31 ರವರೆಗೂ ನಿಷೇಧ - Karavali Times ಅಂತರಾಷ್ಟ್ರೀಯ ವಿಮಾನ ಹಾರಾಟ ಆಗಸ್ಟ್ 31 ರವರೆಗೂ ನಿಷೇಧ - Karavali Times

728x90

31 July 2020

ಅಂತರಾಷ್ಟ್ರೀಯ ವಿಮಾನ ಹಾರಾಟ ಆಗಸ್ಟ್ 31 ರವರೆಗೂ ನಿಷೇಧನವದೆಹಲಿ (ಕರಾವಳಿ ಟೈಮ್ಸ್) : ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ನಿಷೇಧವನ್ನು ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಶುಕ್ರವಾರ ತಿಳಿಸಿದೆ.

ಭಾರತದಿಂದ ಹೊರಹೋಗುವ ಹಾಗೂ ಒಳಬರುವ ನಿಗದಿತ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗಳನ್ನು ಆಗಸ್ಟ್ 31 ರ ರಾತ್ರಿ 11.59ರವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ ಎಂದು ಡಿಜಿಸಿಎ ಪ್ರಕಟಣೆಯಲ್ಲಿ ತಿಳಿಸಿದೆ.‌ ಈ ಆದೇಶ ಸರಕು ವಿಮಾನಗಳು ಮತ್ತು ವಿಶೇಷ ಅನುಮತಿ ಪಡೆದ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. 

ಅಲ್ಲದೆ ಆಯ್ದ ಮಾರ್ಗಗಳಲ್ಲಿ ನಿಯಮಿತವಾಗಿ ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ಸಂಬಂಧಿತ ಆಡಳಿತಗಳು ಅನುಮತಿಸಬಹುದಾಗಿದೆ ಎಂದು ತಿಳಿಸಿದೆ.

ಮಾರ್ಚ್ 25 ರಂದು ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ ನಂತರ ಎಲ್ಲಾ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದುಗೊಳಿಸಲಾಗಿತ್ತು. ಮೇ 25 ರಿಂದ ದೇಶಿಯ ವಿಮಾನ ಹಾರಾಟ ಆರಂಭವಾಗಿದೆ. ಆದರೆ ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಮುಂದುವರೆಸಲಾಗಿದೆ.  • Blogger Comments
  • Facebook Comments

0 comments:

Post a Comment

Item Reviewed: ಅಂತರಾಷ್ಟ್ರೀಯ ವಿಮಾನ ಹಾರಾಟ ಆಗಸ್ಟ್ 31 ರವರೆಗೂ ನಿಷೇಧ Rating: 5 Reviewed By: karavali Times
Scroll to Top