ಮಂಗಳೂರು (ಕರಾವಳಿ ಟೈಮ್ಸ್) : ಕೊರೊನಾ ವೈರಸ್ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಈ ಬಗ್ಗೆ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಸ್ವತಃ ಮಿಥುನ್ ರೈಯವರು ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸದ್ಯ ನಾನು ಬೆಂಗಳೂರಿನಲ್ಲಿ ಕ್ವಾರಂಟೈನ್ ಆಗಿದ್ದೇನೆ. ಅಲ್ಲದೆ ನಿಮ್ಮ ಸೇವೆ ಮಾಡಲು ಆದಷ್ಟು ಬೇಗ ಗುಣಮುಖನಾಗಿ ಬರುತ್ತೇನೆ. ನಿಮ್ಮ ಪ್ರೀತಿ, ವಿಶ್ವಾಸ ಸದಾ ನನ್ನ ಮೇಲಿರಲಿ ಎಂದು ಬರೆದುಕೊಂಡಿದ್ದಾರೆ.
ಹಾಗೆಯೇ ಕೆಲ ದಿನಗಳಿಂದ ಯಾರೆಲ್ಲ ನನ್ನ ಸಂಪರ್ಕದಲ್ಲಿದ್ರೋ ಅವರೆಲ್ಲ ಆದಷ್ಟು ಬೇಗ ಕೋವಿಡ್ 19 ಟೆಸ್ಟ್ ಮಾಡಿಸಿಕೊಳ್ಳಿ ಎಂದು ಇದೇ ವೇಳೆ ಮಿಥುನ್ ರೈ ಮನವಿ ಕೂಡ ಮಾಡಿಕೊಂಡಿದ್ದಾರೆ.
ಲಾಕ್‍ಡೌನ್ ಆದಾಗಿನಿಂದಲೂ ಮಿಥುನ್ ರೈ ಅವರು ಜಿಲ್ಲೆಯ ಜನರ ಸಂಕಷ್ಟಕ್ಕೆ ಸ್ಪಂದಿಸುವ ಸಲುವಾಗಿ ಜಿಲ್ಲೆಯ ನಾನಾ ಕಡೆ ಸುತ್ತಾಡಿ ಅಗತ್ಯ ವಸ್ತುಗಳ ಕಿಟ್ ನ್ನು ಮನೆ ಮನೆಗೆ ತಲುಪಿಸುತ್ತಿದ್ದರು. ಬಳಿಕವೂ ಯಾವುದಾದರೂ ಸಮಸ್ಯೆಗಳು ಗಮನಕ್ಕೆ ತಂದಾಗ ಕೂಡ ಜನರೊಂದಿಗೆ ಬೆರೆಯುತ್ತಿದ್ದರು. ಹೀಗಾಗಿ ಕಳೆದ ಕೆಲ ದಿನದಿಂದ ಸಂಪರ್ಕದಲ್ಲಿದ್ದವರನ್ನು ಸ್ವಯಂ ಪರೀಕ್ಷೆಗೆ ಒಳಗಾಗುವಂತೆ ವಿನಂತಿಸಿದ್ದಾರೆ.
0 comments:
Post a Comment