ಶ್ರೀನಿವಾಸ್ ವಿಶ್ವವಿದ್ಯಾಲಯದ ಪಿ.ಎಚ್.ಡಿ. ವಿದ್ಯಾರ್ಥಿಗಳ ಓರಿಯಂಟೇಷನ್ ಕಾರ್ಯಕ್ರಮ - Karavali Times ಶ್ರೀನಿವಾಸ್ ವಿಶ್ವವಿದ್ಯಾಲಯದ ಪಿ.ಎಚ್.ಡಿ. ವಿದ್ಯಾರ್ಥಿಗಳ ಓರಿಯಂಟೇಷನ್ ಕಾರ್ಯಕ್ರಮ - Karavali Times

728x90

23 July 2020

ಶ್ರೀನಿವಾಸ್ ವಿಶ್ವವಿದ್ಯಾಲಯದ ಪಿ.ಎಚ್.ಡಿ. ವಿದ್ಯಾರ್ಥಿಗಳ ಓರಿಯಂಟೇಷನ್ ಕಾರ್ಯಕ್ರಮಮಂಗಳೂರು (ಕರಾವಳಿ ಟೈಮ್ಸ್) : ನಗರದ ಹೊರ ವಲಯದ ಮುಕ್ಕ ಶ್ರೀನಿವಾಸ್ ನಗರದಲ್ಲಿರುವ ಶ್ರೀನಿವಾಸ್ ವಿಶ್ವವಿದ್ಯಾಲಯದ ರಿಸರ್ಚ್ ಅಂಡ್ ಇನ್ನೋವೇಶನ್ಸ್ ಕೌನ್ಸಿಲ್ ವತಿಯಿಂದ ಜೂನ್ 2020ನೇ ಶೈಕ್ಷಣಿಕ ಸಾಲಿನಲ್ಲಿ ನೋಂದಾವಣಿಗೊಂಡ ಪಿ.ಎಚ್.ಡಿ. ವಿದ್ಯಾರ್ಥಿಗಳ ಓರಿಯಂಟೇಷನ್ ಕಾರ್ಯಕ್ರಮವು ಬುಧವಾರ (ಜುಲೈ 22) ಝೂಮ್ ಆಪ್ ನಲ್ಲಿ ಆಯೋಜಿಸಲಾಯಿತು.

ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ.ಎಸ್. ಐತಾಳ್ ವಿಶ್ವವಿದ್ಯಾಲಯದ ಪಿ.ಎಚ್.ಡಿ. ನೀತಿ ನಿಯಮಗಳು, ಕಾರ್ಯಕಲಾಪಗಳು ಹಾಗೂ ಪಿ.ಎಚ್.ಡಿ.  ಪದವಿಯ ಮಾಹಿತಿಗಳನ್ನು ವಿದ್ಯಾರ್ಥಿಗಳಿಗೆ ನೀಡಿದರು. ಸಂಶೋಧನಾ ವಿಭಾಗದ ನಿರ್ದೇಶಕ ಡಾ. ಪ್ರವೀಣ್ ಬಿ. ಎಂ. ಅವರು ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ಲಭ್ಯವಿರುವ ಸಂಶೋಧನಾ ಕಾರ್ಯಕ್ರಮಗಳು ಹಾಗೂ ಅವುಗಳ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭ ಶ್ರೀನಿವಾಸ್ ವಿಶ್ವವಿದ್ಯಾಲಯದ ಎಲ್ಲಾ ಕಾಲೇಜುಗಳ ಡೀನ್ ಗಳು, ಸಂಶೋಧನಾ ಪ್ರೊಫೆಸರ್ ಗಳು ಹಾಗೂ ಈ ಬಾರಿಯ  ಪಿ.ಎಚ್.ಡಿ. ವಿದ್ಯಾರ್ಥಿಗಳು ಭಾಗವಹಿಸಿದ್ದರು.

 ಡಾ. ಕೃಷ್ಣಪ್ರಸಾದ್ ಕೆ. ಕಾರ್ಯಕ್ರಮ ನಿರ್ವಹಿಸಿದರು.
  • Blogger Comments
  • Facebook Comments

0 comments:

Post a Comment

Item Reviewed: ಶ್ರೀನಿವಾಸ್ ವಿಶ್ವವಿದ್ಯಾಲಯದ ಪಿ.ಎಚ್.ಡಿ. ವಿದ್ಯಾರ್ಥಿಗಳ ಓರಿಯಂಟೇಷನ್ ಕಾರ್ಯಕ್ರಮ Rating: 5 Reviewed By: karavali Times
Scroll to Top