ಮಂಗಳೂರು (ಕರಾವಳಿ ಟೈಮ್ಸ್) : ಖ್ಯಾತ ಯಶಸ್ವಿ ಉದ್ಯಮಿ, ಸಾಮಾಜಿಕ ಹಾಗೂ ಧಾರ್ಮಿಕ ಮುಂದಾಳು, ಶಿಕ್ಷಣ ಪ್ರೇಮಿ ಬಿ. ಅಹ್ಮದ್ ಹಾಜಿ ಮುಹಿಯುದ್ದೀನ್ ತುಂಬೆ ಅವರ ನಿಧನಕ್ಕೆ ಅಖಿಲ ಭಾರತ ಬ್ಯಾರಿ ಪರಿಷತ್ ದ.ಕ. ಜಿಲ್ಲಾ ಸಮಿತಿಯು ಸಂತಾಪ ಸೂಚಿಸಿದೆ.
ಅಹ್ಮದ್ ಹಾಜಿ ಅವರು ತುಂಬೆ ಪ್ರಾಥಮಿಕ, ಪ್ರೌಢ, ಪಿಯು ಕಾಲೇಜು ಹಾಗೂ ಐಟಿಐ ಸಹಿತ ವೃತಿಪರ ಶಿಕ್ಷಣವನ್ನು ಆರಂಭಿಸುವ ಮೂಲಕ ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಕ್ರಾಂತಿಯನ್ನು ಹುಟ್ಟು ಹಾಕಿದವರು. ಮತ್ತು ತುಂಬೆ ಗ್ರಾಮದಲ್ಲಿ ಆರೋಗ್ಯ ಮತ್ತು ಶೈಕ್ಷಣಿಕ ಸಂಸ್ಥೆಯನ್ನು ಸ್ಥಾಪಿಸಿದ ಅವರು ವಿದೇಶದಲ್ಲು ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳನ್ನು ತೆರೆಯುವ ಮೂಲಕ ದೇಶ ವಿದೇಶಗಳಲ್ಲಿ ಹೆಸರು ವಾಸಿಯಾದರು.
ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ಗುರುತಿಸಿದ್ದ ಅವರು ಸರ್ವ ಧರ್ಮಿಯರಲ್ಲೂ ಉತ್ತಮ ಬಾಂಧವ್ಯವನ್ನು ಬೆಳೆಸಿದ್ದರು. ಕೊಡುಗೈ ದಾ£ಯಾದ ಅವರು ಅದೆಷ್ಟೊ ಶಾಲಾ-ಕಾಲೇಜಿಗಳಿಗೆ, ಮದರಸಗಳಿಗೆ ಹಾಗೂ ಮಸೀದಿಗಳಿಗೆ ಸಹಾಯ ಹಸ್ತವನ್ನು ಚಾಚಿದ್ದಾರೆ. ಸೀರತ್ ಕಮಿಟಿ ಹಾಗೂ ಮುಸ್ಲಿಮ್ ಸೆಂಟ್ರಲ್ ಕಮಿಟಿಯ ಸ್ಥಾಪಕಾಧ್ಯಕ್ಷರಾಗಿದ್ದ ಅವರು ಅದೆಷ್ಟೋ ಸಂಘ-ಸಂಸ್ಥೆಗಳಲ್ಲಿ ನಿಸ್ವಾರ್ಥ ಸೇವೆಯನ್ನು ಸಲ್ಲಿಸಿದ್ದಾರೆ.
ಇವರ ನಿಧನ ಬ್ಯಾರಿ ಸಮುದಾಯ ಮತ್ತು ಸಮಾಜಕ್ಕೆ ತುಂಬಲಾರದ ನಷ್ಟವಾಗಿರುತ್ತದೆ. ಅವರ ಮರಣದ ನೋವನ್ನು ಸಹಿಸುವ ಶಕ್ತಿಯನ್ನು ಸೃಷ್ಟಿಕರ್ತನು ಅವರ ಕುಟುಂಬಕ್ಕೆ ಕರುಣಿಸಲಿ ಹಾಗೂ ಅವರ ಈ ಎಲ್ಲಾ ನಿಸ್ವಾರ್ಥ ಸೇವೆಯನ್ನು ಅಲ್ಲಾಹು ಪಾರತ್ರಿಕ ಲೋಕದಲ್ಲಿ ಅನುಗ್ರಹಿಸಲಿ ಎಂದು ಪರಿಷತ್ ಪ್ರಧಾನ ಕಾರ್ಯದರ್ಶಿ ಹಾಜಿ ಕೆ.ಎಸ್. ಅಬೂಬಕ್ಕರ್ ಪಲ್ಲಮಜಲು ಸಂತಾಪ ಸೂಚಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment