ಬಂಟ್ವಾಳ (ಕರಾವಳಿ ಟೈಮ್ಸ್) : ಬಿ ಮೂಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಮತ್ತು ಉಪನ್ಯಾಸಕರ ಉಪಸ್ಥಿತಿಯಲ್ಲಿ ಆಚರಿಸಲಾಯಿತು.
ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷೆ ರಜನಿ ಚಿಕ್ಕಯ್ಯ ಮಠ ಧ್ವಜಾರೋಹಣಗೈದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ದಿನೇಶ್ ಅಮ್ಟೂರು, ಮಹಮ್ಮದ್ ಗೂಡಿನಬಳಿ, ಹರೀಶ್, ಭರತ್, ಸುಷ್ಮಾ ಚರಣ್, ಸಚಿನ್, ಯಶೋಧ, ಸುಜಾತ, ಸನ್ಮತಿ ಜೈನ್, ಉಪನ್ಯಾಸಕರಾದ ಬಾಲಕೃಷ್ಣ ನಾಯ್ಕ ಕೆ., ಲಕ್ಷ್ಮಿ ಆಚಾರ್ಯ, ಸಿಬ್ಬಂದಿಗಳಾದ ಭಾಗ್ಯ, ಕಮಲಾಕ್ಷಿ ಮೊದಲಾದವರು ಭಾಗವಹಿಸಿದ್ದರು.
ಕಾಲೇಜು ಪ್ರಾಂಶುಪಾಲ ಯೂಸುಫ್ ವಿಟ್ಲ ಸ್ವಾಗತಿಸಿ, ಉಪನ್ಯಾಸಕ ದಾಮೋದರ್ ವಂದಿಸಿದರು. ಉಪನ್ಯಾಸಕ ಅಬ್ದುಲ್ ರಝಾಕ್ ಕಾರ್ಯಕ್ರಮ ನಿರೂಪಿಸಿದರು.
0 comments:
Post a Comment