ಬೆಂಗಳೂರು (ಕರಾವಳಿ ಟೈಮ್ಸ್) : ಸಿಇಟಿ ಫರೀಕ್ಷಾ ಫಲಿತಾಂಶ ಆಗಸ್ಟ್ 20 ರಂದು ಪ್ರಕಟಿಸಲಾಗುವುದು ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಕೊರೋನಾ ಲಾಕ್‍ಡೌನ್ ಕಷ್ಟದ ಹಿನ್ನೆಲೆಯಲ್ಲಿ ಇಂಜಿನಿಯರಿಂಗ್ ಸೀಟುಗಳ ಶುಲ್ಕ ಏರಿಕೆ ಮಾಡಲಾಗುವುದಿಲ್ಲ. ಸೀಟು ಹಂಚಿಕೆ ಕೂಡಾ ಕಳೆದ ಸಾಲಿನಲ್ಲಿರುವಂತೆಯೇ ಮುಂದುವರಿಯಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಕಳೆದ ವರ್ಷ ಶೇ. 33 ರಷ್ಟು ಶುಲ್ಕ ಏರಿಕೆ ಮಾಡಲಾಗಿತ್ತು, ಈ ಸಾಲಿನಲ್ಲಿ ಯಾವುದೇ ಶುಲ್ಕ ಏರಿಕೆಯಾಗಲಿ, ಸೀಟು ಹಂಚಿಕೆಯಲ್ಲಿ ವ್ಯತ್ಯಾಸವಾಗಲಿ ಇರುವುದಿಲ್ಲ ಎಂದು ಸಚಿವ ಅಶ್ವತ್ಥ ನಾರಾಯಣ ಸ್ಪಷ್ಟಪಡಿಸಿದ್ದಾರೆ. ಅಕ್ಟೋಬರ್ ತಿಂಗಳಲ್ಲಿ ಸಿಇಟಿ ವಿದ್ಯಾರ್ಥಿಗಳ ಕೌನ್ಸಿಲಿಂಗ್ ನಡೆಸಲಾಗುತ್ತದೆ ಎಂದವರು ತಿಳಿಸಿದರು.
0 comments:
Post a Comment