ಮಂಗಳೂರು (ಕರಾವಳಿ ಟೈಮ್ಸ್) : ಸರಕಾರಿ ಆಸ್ಪತ್ರೆ ಬಲಪಡಿಸಲು, ಖಾಸಗೀ ಆಸ್ಪತ್ರೆ ನಿಯಂತ್ರಿಸಲು, ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗಾಗಿ ಹಾಗೂ ಕೊರೋನಾ ಹೆಸರಲ್ಲಿ ಆಸ್ಪತ್ರೆಗಳ ಲೂಟಿಕೋರ ನೀತಿಯನ್ನು ಖಂಡಿಸಿ, ಮತ್ತು ಎಲ್ಲರಿಗೂ ಸಮಾನ ಗುಣಮಟ್ಟದ ಉಚಿತ ಚಿಕಿತ್ಸೆಗಾಗಿ ಒತ್ತಾಯಿಸಿ ಇಂದು ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ವತಿಯಿಂದ ಕೊಣಾಜೆ ಸಮೀಪದ ಗ್ರಾಮ ಚಾವಡಿ ಜಂಕ್ಷನ್ನಿನಲ್ಲಿ ಸೋಮವಾರ ಪ್ರತಿಭಟನಾ ಸಭೆ ನಡೆಯಿತು.
ಪ್ರತಿಭಟನಾಕಾರನ್ನುದ್ದೇಶಿಸಿ ಡಿವೈಎಫ್ಐ ಮಾಜಿ ರಾಜ್ಯಾಧ್ಯಕ್ಷ , ಕಾರ್ಮಿಕ ಮುಖಂಡ ಸುನಿಲ್ ಕುಮಾರ್ ಬಜಾಲ್ ಹಾಗೂ ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ಅಧ್ಯಕ್ಷ ಅಶ್ರಫ್ ಕೆ ಸಿ ರೋಡ್ ಮಾತನಾಡಿದರು.
ಸಭೆಯಲ್ಲಿ ಡಿವೈಎಫ್ಐ ಜಿಲ್ಲಾ ಉಪಾಧ್ಯಕ್ಷ ರಫೀಕ್ ಹರೇಕಳ, ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ಉಪಾಧ್ಯಕ್ಷ ರಝಾಕ್ ಮೊಂಟೆಪದವು, ಕೋಶಾಧಿಕಾರಿ ಅಶ್ರಫ್ ಹರೇಕಳ, ಕಾರ್ಮಿಕ ಮುಖಂಡ ಇಬ್ರಾಹಿಂ ಮದಕ, ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘದ ಕಾರ್ಯದರ್ಶಿ ಜಗದೀಶ್ ದೇರಳಕಟ್ಟೆ, ಡಿವೈಎಫ್ಐ ಮುಡಿಪು ಘಟಕಾಧ್ಯಕ್ಷ ರಝಾಕ್ ಮುಡಿಪು, ದೇರಳಕಟ್ಟೆ ಘಟಕದ ಅಧ್ಯಕ್ಷ ನವಾಝ್ ಉರುಮಣೆ, ಹಿರಿಯ ಮುಖಂಡ ಹಮೀದ್ ಕೆ ಎಚ್, ಹರೇಕಳ ಗ್ರಾಮ ಸಮಿತಿಯ ಅಧ್ಯಕ್ಷ ನಿಝಾಂ, ಡಿವೈಎಫ್ಐ ಪಾವೂರು ಘಟಕಾಧ್ಯಕ್ಷ ಆಸಿಫ್ ಪಾವೂರ್, ಸಿಪಿಐಎಂ ಮುಖಂಡರಾದ ಎವರಿಸ್ ಕುಟಿನ್ಹಾ , ಉಮರಬ್ಬ ನ್ಯೂಪಡ್ಪು, ಸುಂದರ ಪೂಜಾರಿ, ಸತ್ತಾರ್ ಕೊಜಪಾಡಿ, ಹಮೀದ್ ಮಲಾರ್ ಮೊದಲಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
0 comments:
Post a Comment