ಈ ಬಾರಿ ಗಣೇಶೋತ್ಸವ ಬಡ್ಡಕಟ್ಟೆಗೆ ಸ್ಥಳಾಂತರ
ಬಂಟ್ವಾಳ (ಕರಾವಳಿ ಟೈಮ್ಸ್) : ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದ ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಈ ಬಾರಿ ಅತ್ಯಂತ ಸರಳವಾಗಿ ನಡೆಯಲಿದ್ದು, ಸರಕಾರದ ಕೋವಿಡ್ ಶಿಷ್ಟಾಚಾರಕ್ಕೆ ಮನ್ನಣೆ ಕಲ್ಪಿಸಿ ಆಗಸ್ಟ್ 22 ರಂದು ಶನಿವಾರ ಒಂದೇ ದಿನಕ್ಕೆ ಸೀಮಿತಗೊಳಿಸಲಾಗಿದೆ. ಈ ಬಾರಿ ಗಣೇಶೋತ್ಸವದ ಸ್ಥಳ ಜಕ್ರಿಬೆಟ್ಟುನಿಂದ ಬಡ್ಡಕಟ್ಟೆಗೆ ಸ್ಥಳಾಂತರಿಸಲಾಗಿದೆ. ಬಡ್ಡಕಟ್ಟೆ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 10 ಗಂಟೆಗೆ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ನಡೆಯಲಿದ್ದು, ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ನಡೆಯಲಿದೆ. ಸಂಜೆ 4 ಗಂಟೆಗೆ ಗಣೇಶ ಮೂರ್ತಿಯ ವಿಸರ್ಜನೆ ನಡೆಯಲಿದೆ ಎಂದು ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿಯ ಅಧ್ಯಕ್ಷ ಬಿ ಪದ್ಮಶೇಖರ್ ಜೈನ್ ತಿಳಿಸಿದ್ದಾರೆ.
0 comments:
Post a Comment