ಚಾಮುಂಡೇಶ್ವರಿ ಕ್ಷೇತ್ರದ ಶಾಸ ಜಿ.ಟಿ. ದೇವೇಗೌಡಗೆ ಕೊರೋನಾ ಪಾಸಿಟಿವ್ - Karavali Times ಚಾಮುಂಡೇಶ್ವರಿ ಕ್ಷೇತ್ರದ ಶಾಸ ಜಿ.ಟಿ. ದೇವೇಗೌಡಗೆ ಕೊರೋನಾ ಪಾಸಿಟಿವ್ - Karavali Times

728x90

5 August 2020

ಚಾಮುಂಡೇಶ್ವರಿ ಕ್ಷೇತ್ರದ ಶಾಸ ಜಿ.ಟಿ. ದೇವೇಗೌಡಗೆ ಕೊರೋನಾ ಪಾಸಿಟಿವ್ಬೆಂಗಳೂರು (ಕರಾವಳಿ ಟೈಮ್ಸ್) : ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅವರಿಗೆ ಕೊರೋನಾ ಪಾಸಿಟಿವ್ ಧೃಡಪಟ್ಟಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಅವರು, ನಾನು ಕೂಡ ಕೋವಿಡ್‌-19 ಪರೀಕ್ಷೆ ಮಾಡಿಸಿಕೊಂಡಿದ್ದು, ಅದರಲ್ಲಿ ಪಾಸಿಟಿವ್‌ ವರದಿ ಬಂದಿದೆ. ತಮಗೆ ಯಾವುದೇ ರೀತಿಯ ರೋಗ ಲಕ್ಷಣಗಳಿಲ್ಲ. ಆದರೂ ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ.

ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಕ್ವಾರಂಟೈನ್‌ಗೆ ಒಳಗಾಗಿ ಮತ್ತು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.

 ಶಾಸಕ ಜಿ.ಟಿ.‌ ದೇವೇಗೌಡರು ಯಾವುದೇ  ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗವಹಿಸಿರಲಿಲ್ಲ. ಆದರೆ ಕ್ಷೇತ್ರದಲ್ಲಿ ಕೊರೋನಾ ಸಂಬಂಧಿಸಿ ಸುತ್ತಾಟ, ಜಿಲ್ಲಾಧಿಕಾರಿಗಳು ನೇತೃತ್ವದ ಸಭೆಗಳಲ್ಲಿ ಭಾಗವಹಿಸಿದ್ದರು.  • Blogger Comments
  • Facebook Comments

0 comments:

Post a Comment

Item Reviewed: ಚಾಮುಂಡೇಶ್ವರಿ ಕ್ಷೇತ್ರದ ಶಾಸ ಜಿ.ಟಿ. ದೇವೇಗೌಡಗೆ ಕೊರೋನಾ ಪಾಸಿಟಿವ್ Rating: 5 Reviewed By: karavali Times
Scroll to Top