ನವದೆಹಲಿ (ಕರಾವಳಿ ಟೈಮ್ಸ್) : 2020ನೇ ಸಾಲಿನ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಘೋಷಣೆಯಾಗಿದ್ದು, ಕರ್ನಾಟಕದ ಇಬ್ಬರು ಶಿಕ್ಷಕರಿಗೆ ಪ್ರಶಸ್ತಿ ಲಭಿಸಿದೆ. ಬೆಳ್ತಂಗಡಿ ತಾಲೂಕು ನಡ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಯಾಕೂಬ್, ಕಲಬುರಗಿಯ ಅಫ್ಝಲ್ ಪುರ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಸುರೇಖಾ ಜಗನ್ನಾಥ್ ರಾಷ್ಟ್ರ ಪ್ರಶಸ್ತಿಗೆ ಭಾಜನರಾದ ಶಿಕ್ಷಕರು.
ಶಿಕ್ಷಣ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವಾಲಯ ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕರ ಆಯ್ಕೆ ಪಟ್ಟಿ ಪ್ರಕಟ ಮಾಡಿದ್ದು, ಒಟ್ಟು 47 ಶಿಕ್ಷಕರಿಗೆ ಪ್ರಶಸ್ತಿ ಲಭಿಸಿದೆ. 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಹಾಗೂ 7 ಸಾಂಸ್ಥಿಕ ಆಯ್ಕೆ ಸಮಿತಿ ಒಟ್ಟು 153 ಶಿಕ್ಷಕರ ಅರ್ಜಿ ಪರಿಶೀಲಿಸಿ ಈ ಪ್ರಶಸ್ತಿ ಪಟ್ಟಿ ತಯಾರಿಸಲಾಗಿದೆ. ಬೆಂಗಳೂರಿನ ಕೇಂದ್ರೀಯ ವಿದ್ಯಾಲಯ ಸಂಘಟನ್‍ನ ಶಿಕ್ಷಕ ಚೆಮ್ಮಲರ್ ಷಣ್ಮುಗನ್ ಅವರಿಗೂ ಪ್ರಶಸ್ತಿ ಒಲಿದು ಬಂದಿದೆ.
ಉತ್ತರ ಪ್ರದೇಶ ಹಾಗೂ ಗುಜರಾತ್ ರಾಜ್ಯದ ತಲಾ ಮೂವರು, ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಒಡಿಸ್ಸಾ, ಪಶ್ಚಿಮ ಬಂಗಾಲ, ಜಾರ್ಖಂಡ್ ಮತ್ತು ತಮಿಳುನಾಡು, ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ತಲಾ ಇಬ್ಬರು, ಹರಿಯಾಣ, ಹಿಮಾಚಲ ಪ್ರದೇಶ, ಪಂಜಾಬ್, ದೆಹಲಿ, ಉತ್ತರಾಖಂಡ, ರಾಜಸ್ಥಾನ, ಗೋವಾ, ಮಹಾರಾಷ್ಟ್ರ, ಪುದುಶ್ಯೇರಿ, ಛತ್ತೀಸ್‍ಘಢ, ಮೇಘಾಲಯ, ತ್ರಿಪುರ, ಅಸ್ಸಾಂ, ಕೇರಳ, ಆಂಧ್ರಪ್ರದೇಶ ಮತ್ತು ತೆಲಂಗಾಣ ಹಾಗೂ ಕೇಂದ್ರಾಡಳಿತ ಪ್ರದೇಶ ಲಢಾಕ್ ತಲಾ ಓರ್ವ ಶಿಕ್ಷಕರು ಈ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
0 comments:
Post a Comment