ಪ್ರವಾದಿ ನಿಂದಕರ ವಿರುದ್ದ ಕಠಿಣ ಕ್ರಮ ಆಗಲೇಬೇಕು : ಶಾಸಕ ಯು ಟಿ ಖಾದರ್ - Karavali Times ಪ್ರವಾದಿ ನಿಂದಕರ ವಿರುದ್ದ ಕಠಿಣ ಕ್ರಮ ಆಗಲೇಬೇಕು : ಶಾಸಕ ಯು ಟಿ ಖಾದರ್ - Karavali Times

728x90

12 August 2020

ಪ್ರವಾದಿ ನಿಂದಕರ ವಿರುದ್ದ ಕಠಿಣ ಕ್ರಮ ಆಗಲೇಬೇಕು : ಶಾಸಕ ಯು ಟಿ ಖಾದರ್


 ಕಾನೂನು ಕೈಗೆತ್ತಿಕೊಂಡು ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟ ಮಾಡುವುದನ್ನು ಒಪ್ಪುವುದು ಸಾಧ್ಯವೇ ಇಲ್ಲ


ಮಂಗಳೂರು (ಕರಾವಳಿ ಟೈಮ್ಸ್) : ಲೋಕಕ್ಕೆ ಸೌಹಾರ್ದತೆ, ಸಮಾನತೆ ಹಾಗೂ ಮಾನವೀಯತೆ ಸಾರಿದ ವಿಶ್ವ ಪ್ರವಾದಿ ಮುಹಮ್ಮದ್ (ಸ.ಅ) ರವರನ್ನು ನಿಂದನೆ ಮಾಡಿದವರ ವಿರುದ್ಧ ಗರಿಷ್ಠ ಕ್ರಮ ಕೈಗೊಳ್ಳಲೇಬೇಕು. ಆದರೆ ಇದೇ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡು ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟ ಮಾಡುವುದನ್ನು ಒಪ್ಪುವುದು ಸಾಧ್ಯವೇ ಇಲ್ಲ ಎಂದು ಮಾಜಿ ಸಚಿವ, ಮಂಗಳೂರು ಶಾಸಕ ಯು ಟಿ ಖಾದರ್ ಟ್ವೀಟ್ ಮಾಡಿದ್ದಾರೆ.

ಕೆ ಜಿ ಹಳ್ಳಿಯಲ್ಲಿ ಗಲಭೆಕೋರರ ದಾಂಧಲೆ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಶಾಂತಿ ಕಾಪಾಡಿಕೊಂಡು ಕಾನೂನು ಹೋರಾಟದಲ್ಲಿ ನಂಬಿಕೆ ಇಟ್ಟುಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ. 

ಇನ್ನೊಂದು ಟ್ವೀಟ್ ಮಾಡಿರುವ ಅವರು ಬೆಂಕಿ ಹಚ್ಚುವುದು ನಮ್ಮ ಸಂಸ್ಕೃತಿಯಲ್ಲ. ಏನೇ ಇದ್ದರೂ ಈ ನೆಲದ ಕಾನೂನೇ ಅಂತಿಮ, ಶಾಂತಿ  ಕಾಪಾಡಿ ಎಂದು ಕಾನೂನು ಹೋರಾಟದಲ್ಲಿ ನಂಬಿಕೆ ಇಟ್ಟುಕೊಳ್ಳಿ. ಕೇವಲ ಬೆಂಗಳೂರಷ್ಟೇ ಅಲ್ಲ ರಾಜ್ಯದ ಯಾವುದೇ ಹಳ್ಳಿಯಲ್ಲೂ ಇಂತಹ ಘಟನೆಗೆ ಅವಕಾಶ ನೀಡಬಾರದು ಎಂದು ಬರೆದುಕೊಂಡಿದ್ದಾರೆ. 

ಮತ್ತೊಂದು ಟ್ವೀಟ್ ಮಾಡಿದ ಖಾದರ್, ಪೆÇಲೀಸ್ ಇಲಾಖೆ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ನಿಂದನೆಯಂತಹ ಪ್ರಕರಣವನ್ನು ಆರಂಭಿಕ ಹಂತದಲ್ಲೇ ಇತ್ಯರ್ಥಗೊಳಿಸಿದ್ರೆ, ಪರಿಸ್ಥಿತಿ ಕೈ ಮೀರಿ ಹೋಗುವುದಿಲ್ಲ. ಎಲ್ಲರೂ ಅವರವರ ಜವಾಬ್ದಾರಿ ಅರಿತು ಕೆಲಸ ಮಾಡಬೇಕಿದೆ ಎಂದು ಬರೆದುಕೊಂಡಿದ್ದಾರೆ.


  • Blogger Comments
  • Facebook Comments

0 comments:

Post a Comment

Item Reviewed: ಪ್ರವಾದಿ ನಿಂದಕರ ವಿರುದ್ದ ಕಠಿಣ ಕ್ರಮ ಆಗಲೇಬೇಕು : ಶಾಸಕ ಯು ಟಿ ಖಾದರ್ Rating: 5 Reviewed By: karavali Times
Scroll to Top