ಕಾನೂನಿನ ಮೂಲಕ ನ್ಯಾಯ ಪಡೆಯಬೇಕಾಗಿದೆ
ಶಾಂತಿ-ಸೌಹಾರ್ದತೆಗಾಗಿ ಎಲ್ಲರೂ ಸಹಕರಿಸಿ
ಬೆಂಗಳೂರು (ಕರಾವಳಿ ಟೈಮ್ಸ್) : ಕೆಜಿ ಹಳ್ಳಿಯಲ್ಲಿ ನಡೆದ ಗಲಾಟೆಯ ಬಗ್ಗೆ ಮಾಜಿ ಸಚಿವ, ಶಾಸಕ ಝಮೀರ್ ಅಹ್ಮದ್ ಖಾನ್ ಪ್ರತಿಕ್ರಿಯಿಸಿದ್ದು, ಸರಣಿ ಟ್ವೀಟ್ ಮೂಲಕ ತಮ್ಮ ದುಗುಡವನ್ನು ಹೊರ ಹಾಕಿದ್ದಾರೆ.
“ಪ್ರವಾದಿ ಮಹಮ್ಮದ್ ಪೈಗಂಬರರನ್ನು ವ್ಯಕ್ತಿಯೊಬ್ಬ ನಿಂದಿಸಿರುವುದು ವೈಯಕ್ತಿಕವಾಗಿ ನನಗೂ ಸಾಕಷ್ಟು ನೋವಾಗಿದೆ. ನಮ್ಮ ನೋವು, ಆಕ್ರೋಶವನ್ನು ಕಾನೂನು ಹೋರಾಟದ ಮೂಲಕದ ತೋರಿಸಿ, ಕಠಿಣ ಶಿಕ್ಷೆಗೆ ಆಗ್ರಹಿಸಬೇಕೇ ಹೊರತು ಅಶಾಂತಿಯ ಮೂಲಕವಲ್ಲ. ನ್ಯಾಯಕ್ಕಾಗಿ ನಡೆಸುವ ಕಾನೂನು ಹೋರಾಟದಲ್ಲಿ ನಾನೂ ನಿಮ್ಮ ಜೊತೆಗಿರುತ್ತೇನೆ” ಎಂದು ಬರೆದುಕೊಂಡಿದ್ದಾರೆ.
ಇನ್ನೊಂದು ಟ್ವೀಟ್ ಮಾಡಿದ ಅವರು “ಗೋಲಿಬಾರ್ ನಿಂದ ಮೃತಪಟ್ಟ ಯುವಕರ ಮನೆಗೆ ಭೇಟಿ ನೀಡಿದ್ದೆ, ನಿಜಕ್ಕೂ ಅವರ ಕುಟುಂಬಗಳ ಪರಿಸ್ಥಿತಿ ಕಂಡು ಕಣ್ಣೀರು ಬಂತು. ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಾಯಿ, ತಂಗಿಗೆ ಯಾರು ದಿಕ್ಕು? ಯಾರೋ ಕಿಡಿಗೇಡಿಗಳು ಕಲ್ಲು ತೂರಿ, ಬೆಂಕಿ ಹಚ್ಚಿದರು, ಬಲಿಯಾದವರು ಇನ್ಯಾರೋ” ಎಂದು ಬರೆದು ದುಃಖ ವ್ಯಕ್ತಪಡಿಸಿದ್ದಾರೆ.
ಮತ್ತೊಂದು ಟ್ವೀಟ್ ಮಾಡಿದ ಝಮೀರ್, “ಹಿರಿಯ ಪೆÇಲೀಸ್ ಅಧಿಕಾರಿಗಳು, ಧಾರ್ಮಿಕ ಮುಖಂಡರೊಂದಿಗೆ ಚರ್ಚೆ ಮಾಡಿದ್ದೇನೆ. ತಪ್ಪಿತಸ್ಥರಿಗೆ ಖಂಡಿತಾ ಕಠಿಣ ಶಿಕ್ಷೆ ಆಗಲಿದೆ. ಗಾಳಿ ಸುದ್ದಿಗಳಿಗೆ ಕಿವಿ ಕೊಡಬೇಡಿ, ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯುವ ನಮ್ಮ ನಿರ್ಧಾರ ಅಚಲವಾಗಿರಲಿ. ಶಾಂತಿ, ಸೌಹಾರ್ದತೆಗೆ ಎಲ್ಲರೂ ಸಹಕರಿಸಿ ಎಂದು ಕೈ ಮುಗಿದ್ದು ಮನವಿ ಮಾಡುತ್ತೇನೆ.” ಎಂದು ಬರೆದು ಮನವಿ ಮಾಡಿಕೊಂಡಿದ್ದಾರೆ.
0 comments:
Post a Comment