ಬಂಟ್ವಾಳ (ಕರಾವಳಿ ಟೈಮ್ಸ್) : ಇಲ್ಲಿನ ವಿಧಾನ ಸಭಾ ಕ್ಷೇತ್ರದ ಬಂಟ್ವಾಳ ಬ್ಲಾಕ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ “ಆರೋಗ್ಯ ಹಸ್ತ” ಕಾರ್ಯಕ್ರಮ ಮೆಲ್ಕಾರ್ ಬಿರ್ವ ಆಡಿಟೋರಿಯಂ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಮಾತನಾಡಿ, ಮಾನವೀಯತೆ ದೃಷ್ಟಿಯಿಂದ ಜನರ ಸೇವೆ ಮಾಡುವ ಅವಕಾಶವನ್ನು ಸದುಪಯೋಗಗೊಳಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. ಮಾಜಿ ಸಚಿವ ಬಿ ರಮಾನಾಥ ರೈ ತರಬೇತುದಾರರಿಗೆ ಕಾರ್ಯಕ್ರಮದ ಪ್ರಾಮುಖ್ಯತೆಯನ್ನು ತಿಳಿಸಿದರಲ್ಲದೆ ಸಾರ್ವಜನಿಕರ ಆರೋಗ್ಯ ಜತೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ವಿನಂತಿಸಿದರು.
ರಾಜೇಶ್ ಪೂಜಾರಿ ಕೋವಿಡ್-19 ಸಹಾಯವಾಣಿ ಸದಸ್ಯರು ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡುವ ಮೂಲಕ ಸಾರ್ವಜನಿಕರ ಮನಸನ್ನು ಗೆಲ್ಲುವಂತೆ ಕರೆ ನೀಡಿದರು ಹಾಗೂ ಪಿಪಿಇ ಕಿಟ್ ಬಳಕೆ ಮತ್ತು ಖಾಯಿಲೆ ತಪಾಸಣೆ ಮಾಡುವ ರೀತಿಯನ್ನು ವಿವರಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎನ್. ಗಫೂರ್, ಜಿಲ್ಲಾ ತರಬೇತಿಗಾರ ರಘುರಾಜ್ ಕದ್ರಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿ.ಪಂ. ಸದಸ್ಯರಾದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಬಿ ಪದ್ಮಶೇಖರ್ ಜೈನ್, ತಾ.ಪಂ. ಉಪಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಸದಸ್ಯ ಸಂಜೀವ ಪೂಜಾರಿ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಎಪಿಎಂಸಿ ಮಾಜಿ ಅಧ್ಯಕ್ಷ ಪದ್ಮನಾಭ ರೈ, ಇಬ್ರಾಹಿಂ ನವಾಝ್ ಮೊದಲಾದವರು ಭಾಗವಹಿಸಿದ್ದರು.
0 comments:
Post a Comment