ನವದೆಹಲಿ, ಸೆ. 25, 2020 (ಕರಾವಳಿ ಟೈಮ್ಸ್) : ಬಿಹಾರ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಮಹೂರ್ತ ಫಿಕ್ಸ್ ಮಾಡಿದ್ದು, ಅಕ್ಬೋಬರ್ 28, ನವೆಂಬರ್3 ಹಾಗೂ 7 ರಂದು ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ.
ಕೇಂದ್ರ ಚುನಾವಣಾ ಆಯೋಗದ ಅಧ್ಯಕ್ಷ ಸುನಿಲ್ ಅರೋರಾ ಅವರು ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದರು. ಬಿಹಾರ ವಿಧಾನಸಭೆ ಚುನಾವಣೆ ಒಟ್ಟು ಮೂರು ಹಂತಗಳಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಅಕ್ಟೋಬರ್ 28ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, 71 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್ 3ರಂದು 2ನೇ ಹಂತದ ಚುನಾವಣೆ ನಡೆಯಲಿದ್ದು, 94 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಸಲಾಗುತ್ತದೆ. ಅಂತಿಮ ಹಾಗೂ 3ನೇ ಹಂತದ ಚುನಾವಣೆ ನವೆಂಬರ್ 7ರಂದು ನಡೆಯಲಿದ್ದು, ಒಟ್ಟು 78 ವಿಧಾನಸಭಾ ಕ್ಷೇತ್ರಗಳಲ್ಲಿ ಅಂದು ಮತದಾನ ನಡೆಯಲಿದೆ. ನವೆಂಬರ್ 10ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದ್ದು, ಅಂದೇ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದರು.
ಕೊರೋನಾ ಸಾಂಕ್ರಾಮಿಕ ಹಿನ್ನಲೆಯಲ್ಲಿ ಈ ಬಾರಿಯ ಮತದಾನದ ಅವಧಿಯನ್ನು 1 ಗಂಟೆ ಹೆಚ್ಚಳ ಮಾಡಲಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಮತದಾನ ನಡೆಯಲಿದೆ. ಈ ಹಿಂದೆ 5 ಗಂಟೆಯವರೆಗೆ ಮಾತ್ರ ಮತದಾನ ನಡೆಯುತ್ತಿತ್ತು. ಈ ನಿಯಮ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಅನ್ವಯವಾಗುವುದಿಲ್ಲ ಎಂದು ಸುನಿಲ್ ಅರೋರಾ ತಿಳಿಸಿದರು.
















0 comments:
Post a Comment