ಬಂಟ್ವಾಳ, ಸೆ. 24, 2020 (ಕರಾವಳಿ ಟೈಮ್ಸ್) : ಬಂಟ್ವಾಳ ತಾಲೂಕಿನ ಐತಿಹಾಸಿಕ ಹಿನ್ನೆಲೆ ಇರುವ ಸಜಿಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲ್ ಶ್ರೀ ಕಲ್ಲುರ್ಟಿ ದೈವಸ್ಥಾನದ ಆಡಳಿತಾಧಿಕಾರಿಯಾಗಿ ಇತ್ತೀಚೆಗೆ ನಿಯುಕ್ತಿಗೊಂಡಿದ್ದ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.
ಪಣೋಲಿಬೈಲ್ ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ದೈವದ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ದೈವಸ್ಥಾನಕ್ಕೆ ಸಂಬಂಧಿಸಿದ ಅರ್ಚಕ ವರ್ಗ, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
0 comments:
Post a Comment