ಬೆಂಗಳೂರು, ಸೆ. 19, 2020 (ಕರಾವಳಿ ಟೈಮ್ಸ್) : ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರಿಗೆ ಶನಿವಾರ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಟ್ವೀಟ್ ಮಾಡಿರುವ ಡಿಸಿಎಂ ಅಶ್ವತ್ಥನಾರಾಯಣ ಅವರು, ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್-19 ಪರೀಕ್ಷೆಗೆ ಒಳಪಟ್ಟಿದ್ದು, ಪಾಸಿಟಿವ್ ದೃಢಪಟ್ಟಿದೆ. ಆದರೆ ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದೂ ಡಿಸಿಎಂ ಟ್ವಿಟರ್‍ನಲ್ಲಿ ಮನವಿ ಮಾಡಿದ್ದಾರೆ.
0 comments:
Post a Comment