ಕೇಂದ್ರದ ಮಾಜಿ ಸಚಿವ ರಘುವಂಶ್ ಪ್ರಸಾದ್ ಸಿಂಗ್ ನಿಧನ - Karavali Times ಕೇಂದ್ರದ ಮಾಜಿ ಸಚಿವ ರಘುವಂಶ್ ಪ್ರಸಾದ್ ಸಿಂಗ್ ನಿಧನ - Karavali Times

728x90

13 September 2020

ಕೇಂದ್ರದ ಮಾಜಿ ಸಚಿವ ರಘುವಂಶ್ ಪ್ರಸಾದ್ ಸಿಂಗ್ ನಿಧನಪಾಟ್ನಾ, ಸೆ. 13, 2020 (ಕರಾವಳಿ ಟೈಮ್ಸ್) : ಕೇಂದ್ರದ ಮಾಜಿ ಸಚಿವ ಹಿರಿಯ ಸಮಾಜವಾದಿ ಡಾ ರಘುವಂಶ ಪ್ರಸಾದ್ ಸಿಂಗ್ ಭಾನುವಾರ ಬೆಳಗ್ಗೆ ನಿಧನ ಹೊಂದಿದ್ದಾರೆ. ಎದೆನೋವು ಕಾರಣಕ್ಕೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ 74 ವರ್ಷದ ರಘುವಂಶ ಪ್ರಸಾದ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ಜೂನ್ 17 ರಂದು ಅವರಿಗೆ ಕೋವಿಡ್-19 ಕಂಡುಬಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಿಹಾರ ರಾಜ್ಯದ ವೈಶಾಲಿ ಜಿಲ್ಲೆಯವರಾದ ಡಾ ರಘುವಂಶ್ ಪ್ರಸಾದ್ ಸಿಂಗ್, ಯುಪಿಎ ಸರಕಾರದ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು. ಆರ್ ಜೆ ಡಿಯಲ್ಲಿ ಭಿನ್ನಾಭಿಪ್ರಾಯ ಬಂದು ಇತ್ತೀಚೆಗೆ ಅವರು ಪಕ್ಷ ತೊರೆದಿದ್ದರು. ನಾನು 32 ವರ್ಷ ಲಾಲೂ ಪ್ರಸಾದ್ ಯಾದವ್ ಜೊತೆಗಿದ್ದು, ಆದರೆ ಈಗ ನನ್ನನ್ನು ಕ್ಷಮಿಸಿ, ನಾನು ಬಿಟ್ಟು ಹೋಗುತ್ತೇನೆ ಎಂದು ಜೈಲಿನಲ್ಲಿರುವ ಲಾಲೂ ಪ್ರಸಾದ್ ಯಾದವ್‍ಗೆ ಪತ್ರ ಬರೆದಿದ್ದರು. ಐದು ಬಾರಿ ವೈಶಾಲಿ ಕ್ಷೇತ್ರದ ಸಂಸದರಾಗಿದ್ದ ರಘುವಂಶ್ ಪ್ರಸಾದ್ 2014ರ ಚುನಾವಣೆಯಲ್ಲಿ ಮತ್ತು ಕಳೆದ ವರ್ಷದ ಚುನಾವಣೆಯಲ್ಲಿ ಕೂಡ ಸೋತಿದ್ದರು.

ಇತ್ತೀಚೆಗೆ ಮೂರು ಬಾರಿ ಬಿಹಾರ ಸಿಎಂ ನಿತೀಶ್ ಕುಮಾರ್‍ಗೆ ಪತ್ರ ಬರೆದು ವೈಶಾಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ನಡೆಸುವಂತೆ ಮತ್ತು ನರೇಗಾ ಕಾನೂನಿಗೆ ತಿದ್ದುಪಡಿ ವಿಧೇಯಕವನ್ನು ತರುವಂತೆ ಒತ್ತಾಯಿಸಿದ್ದರು. ನೈತಿಕ ರಾಜಕೀಯ ಇತ್ತೀಚಿನ ದಿನಗಳಲ್ಲಿ ಅಧಃಪತನವಾಗುತ್ತಿದೆ ಎಂದವರು ಬೇಸರ ವ್ಯಕ್ತಪಡಿಸಿದ್ದರು.

ಕೇಂದ್ರದ ಮಾಜಿ ಸಚಿವ ರಘುವಂಶ್ ಪ್ರಸಾದ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅವರ ನಿಧನವು ಬಿಹಾರ ರಾಜ್ಯದ ರಾಜಕೀಯ ಮತ್ತು ದೇಶದ ರಾಜಕೀಯ ಪರಂಪರೆಗೆ ತುಂಬಲಾರದ ನಷ್ಟ ಎಂದಿದ್ದಾರೆ.  • Blogger Comments
  • Facebook Comments

0 comments:

Post a Comment

Item Reviewed: ಕೇಂದ್ರದ ಮಾಜಿ ಸಚಿವ ರಘುವಂಶ್ ಪ್ರಸಾದ್ ಸಿಂಗ್ ನಿಧನ Rating: 5 Reviewed By: karavali Times
Scroll to Top