ಬಂಟ್ವಾಳ, ಸೆ. 27, 2020 (ಕರಾವಳಿ ಟೈಮ್ಸ್) : ಕಂದಾಯ ಇಲಾಖೆ ಬಂಟ್ವಾಳ, ಮಂಗಳೂರು ಕೆ.ಎಸ್. ಹೆಗ್ಡೆ ಆಸ್ಪತ್ರೆ, ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನ ಇವುಗಳ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಕಂದಾಯ ಇಲಾಖಾ ಸಿಬ್ಬಂದಿಗಳಿಗೆ ಆರೋಗ್ಯ ತಪಾಸಣಾ ಶಿಬಿರ ಭಾನುವಾರ ಬಿ ಸಿ ರೋಡು ಮಿನಿ ವಿಧಾನಸೌಧದಲ್ಲಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಾಲೂಕು ತಹಶೀಲ್ದಾರ್ ರಶ್ಮಿ ಎಸ್.ಆರ್. ಕರ್ತವ್ಯದ ಒತ್ತಡಗಳ ಮಧ್ಯೆ ಆರೋಗ್ಯವನ್ನು ಕಡೆಗಣಿಸಬೇಡಿ. ಸರಕಾರಿ ಅಧಿಕಾರಿ-ಸಿಬ್ಬಂದಿಗಳು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಿದಾಗ ಇನ್ನಷ್ಟು ಸಾರ್ವಜನಿಕ ಸೇವೆ ಮಾಡಲು ಸಾಧ್ಯವಿದೆ ಎಂದರು.
ಸೇವಾಂಜಲಿ ಪ್ರತಿಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜಾ, ಡಾ ಸುರೇಶ್, ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಹೃದಯ ತಜ್ಞ ಡಾ. ಕೆ ಸುಬ್ರಹ್ಮಣ್ಯ, ಡಾ ಪ್ರೇರಣಾ ಮನಃಶಾಸ್ತ್ರಜ್ಜ ಡಾ. ಸಂತೋಷ್ ಪ್ರಭು, ಡಾ. ಗೋವಿಂದ ರಾಜ್ ಭಟ್ ಮೊದಲಾದವರು ಭಾಗವಹಿಸಿದ್ದರು.
ಕಂದಾಯ ಇಲಾಖಾ ಸಿಬ್ಬಂದಿಗಳು, ಭುಮಾಪನಾ ಇಲಾಖಾ ಸಿಬ್ಬಂದಿಗಳು ಶಿಬಿರದ ಸದುಪಯೋಗ ಪಡೆದುಕೊಂಡರು. ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿ, ವಂದಿಸಿದರು.
0 comments:
Post a Comment