ಬೆಂಗಳೂರು, ಸೆ. 23, 2020 (ಕರಾವಳಿ ಟೈಮ್ಸ್) : ರೈತ ವಿರೋಧಿ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿವಿಧ ರೈತಪರ ಸಂಘಟನೆಗಳು ಸೋಮವಾರ ಕರ್ನಾಟಕ ಬಂದ್ ನಡೆಸಲು ತೀರ್ಮಾನಿಸಿದೆ.
ಕೇಂದ್ರ ಸರಕಾರದ ರೈತ, ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಸೆಪ್ಟೆಂಬರ್ 28 ರಂದು ಕರ್ನಾಟಕ ಬಂದ್‍ಗೆ ಕರೆ ನೀಡಲಾಗಿದೆ. ಅಗತ್ಯ ಸೇವೆ ಹೊರತುಪಡಿಸಿ ಸಂಪೂರ್ಣ ಬಂದ್ ಆಚರಿಸಲಾಗುವುದು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಸೋಮವಾರ ಬಂದ್‍ಗೆ ಕರೆ ನೀಡುವ ಬಗ್ಗೆ ಚರ್ಚೆ ನಡೆಯುತ್ತಿತ್ತು. ನಮ್ಮ ಒತ್ತಾಯಕ್ಕೆ ಮಣಿದು ಮಸೂದೆಯನ್ನು ತಡೆ ಹಿಡಿಯಬಹುದು ಎಂಬ ವಿಶ್ವಾಸವಿತ್ತು. ಆದರೆ ಸರಕಾರದ್ದು ಮೊಸಳೆ ಕಣ್ಣೀರು ಎಂಬುವುದು ಖಚಿತವಾಗಿದೆ. ಬೀದಿಯಲ್ಲಿ ನಾವು ಪ್ರತಿಭಟನೆ ಮಾಡುತ್ತಿದ್ದರೂ ನಮ್ಮನ್ನು ಮಾತನಾಡಿಸಲು ಸರಕಾರ ಮುಂದಾಗಿಲ್ಲ. ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದವರು ತಿಳಿಸಿದರು.
ಇದೊಂದು ಕಾಪೆÇೀರೇಟ್ ಸರಕಾರವಾಗಿದ್ದು, ಮಸೂದೆ ಬಗ್ಗೆ ರೈತರ ಸಲಹೆ ಕೂಡಾ ಪಡೆದುಕೊಂಡಿಲ್ಲ. ಎಪಿಎಂಸಿ ಮಸೂದೆ ರೈತರ ಮರಣ ಶಾಸನವಾಗಿದೆ. ಬಂಡವಾಳ ಶಾಹಿ ಸರಕಾರ ಇದಾಗಿದೆ. ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಿಎಂ ಯಡಿಯೂರಪ್ಪ ಅವರ ಅಸಲಿ ಮುಖವಾಡ ಬಯಲಾಗಿದೆ ಎಂದವರು ಆಕ್ರೋಶ ವ್ಯಕ್ತಪಡಿಸಿದರು.
ಸೆಪ್ಟೆಂಬರ್ 25ರಂದು ಕರೆ ನೀಡಲಾಗಿರುವ ಭಾರತ್ ಬಂದ್ ಜೊತೆಗೆ ಕರ್ನಾಟಕಲ್ಲೂ ಬಂದ್ ಆಚರಿಸಲು ಈ ಮೊದಲು ರೈತ ಸಂಘಟನೆಗಳು ಯೋಜಿಸಿದ್ದವು. ಆದರೆ, 25ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಮಾಡಬೇಕೆಂದು ತೀರ್ಮಾನಿಸಲಾಗಿದ್ದು, ಸೆಪ್ಟೆಂಬರ್ 28 ರಂದು ಕರ್ನಾಟಕ ಬಂದ್‍ಗೆ ಕರೆ ನೀಡಿವೆ.
0 comments:
Post a Comment