ಉಡುಪಿ, ಸೆ. 24, 2020 (ಕರಾವಳಿ ಟೈಮ್ಸ್) : ಇಲ್ಲಿನ ಹಿರಿಯಡ್ಕ ಸಿಂಡಿಕೇಟ್ ಬ್ಯಾಂಕ್ ಮುಂಭಾಗದಲ್ಲಿ ಗುರುವಾರ ಹಾಡುಹಗಲೇ ರಿಯಲ್ ಎಸ್ಟೇಟ್ ಉದ್ಯಮಿ, ಕಾಪು ತಾಲೂಕಿನ ಇನ್ನಾ ಗ್ರಾಮದ ನಿವಾಸಿ ಕಿಶನ್ ಎಂಬವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾರೆ.
ಕಿಶನ್ ತನ್ನ ಸ್ನೇಹಿತನ ಜೊತೆ ಕಾರಿನಲ್ಲಿ ತೆರಳುತ್ತಿದ್ದಾಗ ಉಡುಪಿ ಕಡೆಯಿಂದ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಕಿಶನ್ ಜೊತೆ ಮಾತಿನ ಚಕಮಕಿಗೆ ಇಳಿದಿದ್ದು, ಬಳಿಕ ಕಿಶನ್ ಕಾರಿನಿಂದ ಇಳಿಯುತ್ತಿದ್ದಂತೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ತಲೆ ಮತ್ತು ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಕಿಶನ್ ಒಡ್ಡಾಡಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.
ಕಿಶನ್ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದು, ಅಪರಾಧ ಹಿನ್ನಲೆಯನ್ನೂ ಹೊಂದಿದ್ದರು ಎನ್ನಲಾಗಿದೆ. ಹಳೆಯ ದ್ವೇಷದ ಹಿನ್ನಲೆಯಲ್ಲಿ ಕೃತ್ಯ ನಡೆದಿರುವ ಸಾಧ್ಯತೆ ಬಗ್ಗೆ ಪೊಲೀಸರು ಶಂಕಿಸಿದ್ದು, ದುಷ್ಕರ್ಮಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.
0 comments:
Post a Comment