ಸೆ. 21 ರಿಂದ ಶಾಲೆಗಳು ತೆರಯಲಿವೆ, ಆದರೆ ಕಡ್ಡಾಯ ತರಗತಿ ಸದ್ಯಕ್ಕಿಲ್ಲ : ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ - Karavali Times ಸೆ. 21 ರಿಂದ ಶಾಲೆಗಳು ತೆರಯಲಿವೆ, ಆದರೆ ಕಡ್ಡಾಯ ತರಗತಿ ಸದ್ಯಕ್ಕಿಲ್ಲ : ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ - Karavali Times

728x90

18 September 2020

ಸೆ. 21 ರಿಂದ ಶಾಲೆಗಳು ತೆರಯಲಿವೆ, ಆದರೆ ಕಡ್ಡಾಯ ತರಗತಿ ಸದ್ಯಕ್ಕಿಲ್ಲ : ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ
ಶಿಕ್ಷಕರು ಕಡ್ಡಾಯವಾಗಿ ಶಾಲೆಗೆ ಬರಬೇಕು. 9 ರಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಪಠ್ಯದ ಅನುಮಾನ ಬಗೆಹರಿಸಿಕೊಳ್ಳಲು ಅವಕಾಶ, ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಪೋಷಕರ ಅನುಮತಿ ಕಡ್ಡಾಯ


ಸರಕಾರಿ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಎಲ್ಲ ವ್ಯವಸ್ಥೆ ಮಾಡಲಾಗುವುದು, ಖಾಸಗಿ ಶಾಲೆ ಬಿಟ್ಟು ಬರುವ ವಿದ್ಯಾರ್ಥಿಗಳಿಗೆ ವರ್ಗಾವಣೆ ಪತ್ರ ಕಡ್ಡಾಯವಲ್ಲ, ಶಾಲೆಗಳು ನೀಡದಿದ್ದಲ್ಲಿ ನೇರವಾಗಿ ಬಿಇಒ ಗಳಿಂದಲೇ ನೀಡುವ ವ್ಯವಸ್ಥೆ ಮಾಡಲಾಗುವುದು : ಸಚಿವರ ಆದೇಶ


ಮೈಸೂರು, ಸೆ. 18, 2020 (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ಸೆ. 21 ರಿಂದ ಶಾಲೆಗಳನ್ನು ತೆರೆದು ಪಠ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಇರುವ ಅನುಮಾನಗಳನ್ನು ಬಗೆಹರಿಸಿಕೊಳ್ಳಲು ಅನುಮತಿ ನೀಡಲಾಗಿದೆ ಹೊರತು ತರಗತಿ ನಡೆಸಲು ಅಲ್ಲ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. 

ನಗರದಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ ಸಚಿವರು, ರಾಜ್ಯದಲ್ಲಿ ಸೆ. 21 ರಂದು ಶಾಲೆಗಳನ್ನು ಮಾತ್ರ ತೆರೆಯುತ್ತೇವೆಯೇ ಹೊರತು ತರಗತಿ ಆರಂಭ ಮಾಡುತ್ತಿಲ್ಲ. ಈಗ ಅನುಮತಿ ಸಿಕ್ಕಿರುವುದು ಪಠ್ಯದ ಅನುಮಾನಗಳನ್ನು ಬಗೆಹರಿಸಿಕೊಳ್ಳಲು. ಅದು ಕೂಡಾ ಕಡ್ಡಾಯ ಅಲ್ಲ. ಇದಕ್ಕೂ ಪೆÇೀಷಕರ ಅನುಮತಿ ಕಡ್ಡಾಯ. ಸೆಪ್ಟೆಂಬರ್ 21 ರಿಂದ ಎಲ್ಲಾ ಶಿಕ್ಷಕರು ಶಾಲೆಗೆ ಬರಬೇಕು. ಸೆಪ್ಟೆಂಬರ್ 21 ರಿಂದ 9, 10, 11, 12ನೇ ತರಗತಿ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಬಗ್ಗೆ ಏನಾದರೂ ಅನುಮಾನ ಇದ್ದರೆ ಸ್ಪಷ್ಟೀಕರಣ ತೆಗೆದುಕೊಳ್ಳಬಹುದು. ಅದು ದೈನಂದಿನ ತಗರತಿ ರೀತಿ ಅಲ್ಲ. ಓದಿದ್ದು ಅರ್ಥವಾಗಿಲ್ಲ ಅಂದರೆ ತಮ್ಮ ಶಾಲಾ ಶಿಕ್ಷಕರ ಜೊತೆ ಮಾಹಿತಿ ಪಡೆದುಕೊಳ್ಳಬಹುದು ಎಂದರು.

ಶಾಲೆಯನ್ನು ಮತ್ತೆ ಆರಂಭಿಸಲು ಕೇಂದ್ರದ ಅನುಮತಿ ಬೇಕು. ಅನುಮತಿ ನೀಡಿದ ನಂತರವೇ ನಿರ್ಧಾರ ತೆಗೆದುಕೊಳ್ಳುತ್ತೇವೆ. ಸದ್ಯಕ್ಕೆ ಕೇಂದ್ರ ಸರ್ಕಾರ ಇನ್ನೂ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ. ಶಾಲೆಗೆ ಬರಲು ವಿದ್ಯಾರ್ಥಿಗಳು ಉತ್ಸಾಹಕರಾಗಿದ್ದಾರೆ. ಆದರೆ ಪೆÇೀಷಕರಿಗೆ ಇನ್ನೂ ಆತಂಕವಿದೆ. ಹೀಗಾಗಿ ಪೆÇೀಷಕರಿಂದ ಕೂಡ ಒಂದು ಅನುಮತಿ ಪತ್ರವನ್ನು ತೆಗೆದುಕೊಳ್ಳುತ್ತೇವೆ ಎಂದು ಸಚಿವರು ವಿವರಿಸಿದರು. 

ಕೊರೊನಾ ಸಂಕಷ್ಟದಿಂದಾಗಿ ಈ ಬಾರಿ ಶೈಕ್ಷಣಿಕ ವರ್ಷದಲ್ಲಿ ಹೆಚ್ಚಿನ ಶುಲ್ಕ ತೆಗೆದುಕೊಳ್ಳುಬಾರದೆಂದು ಆದೇಶ ಹೊರಡಿಸಿದ್ದೇವೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಸಂಪೂರ್ಣ ಶುಲ್ಕ ತೆಗೆದುಕೊಳ್ಳಬಾರದು. ಒಂದು ಕಂತಿನ ಶುಲ್ಕ ತೆಗೆದುಕೊಳ್ಳಲು ಅನುಮತಿ ಇದೆ. ಖಾಸಗಿ ಶಾಲೆ ಬಿಟ್ಟು ಸರಕಾರಿ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುತ್ತದೆ. ಸರಕಾರಿ ಶಾಲೆಗೆ ಎಷ್ಟೇ ವಿದ್ಯಾರ್ಥಿಗಳೂ ಬಂದರೂ ಎಲ್ಲರಿಗೂ ಬೇಕಾಗುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು. ವರ್ಗಾವಣೆಗೆ ಖಾಸಗಿ ಶಾಲೆಯ ವರ್ಗಾವಣೆ ಪತ್ರ ಕಡ್ಡಾಯವಲ್ಲ. ಖಾಸಗಿ ಸಂಸ್ಥೆಗಳು ವರ್ಗಾವಣೆ ಪತ್ರ ಕೊಡದಿದ್ದರೆ ಬಿಇಓ ಮೂಲಕವೇ ನೀಡುವ ವ್ಯವಸ್ಥೆ ಮಾಡುತ್ತೇವೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. 


  • Blogger Comments
  • Facebook Comments

0 comments:

Post a Comment

Item Reviewed: ಸೆ. 21 ರಿಂದ ಶಾಲೆಗಳು ತೆರಯಲಿವೆ, ಆದರೆ ಕಡ್ಡಾಯ ತರಗತಿ ಸದ್ಯಕ್ಕಿಲ್ಲ : ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ Rating: 5 Reviewed By: karavali Times
Scroll to Top