ಪರೀಕ್ಷಾ ರಹಿತ ವರ್ಷವೆಂದು ಘೋಷಿಸಲು ಆಯೋಗ ಸೂಚನೆ
ಬೆಂಗಳೂರು, ಅ. 09, 2020 (ಕರಾವಳಿ ಟೈಮ್ಸ್) : ಸಣ್ಣ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿರುತ್ತದೆ ಎಂದು ವಾದಿಸಿರುವ ರಾಜ್ಯ ಮಕ್ಕಳ ಹಕ್ಕು ಆಯೋಗ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ತಕ್ಷಣವೇ ಶಾಲೆಗಳನ್ನು ತೆರೆಯುವಂತೆ ರಾಜ್ಯ ಸರಕಾರಕ್ಕೆ ಶಿಫಾರಸ್ಸು ಮಾಡಿದೆ.
ಕೋವಿಡ್-19 ಲಾಕ್‍ಡೌನ್ ಬಳಿಕ ಕೇಂದ್ರ ಸರಕಾರದ ಅನ್‍ಲಾಕ್-5 ಮಾರ್ಗಸೂಚಿ ಹೊರಬಿದ್ದರೂ ರಾಜ್ಯ ಸರಕಾರ ಶಾಲೆಗಳನ್ನು ತೆರೆಯಲು ಸದ್ಯಕ್ಕೆ ಮುಂದಾಗುತ್ತಿಲ್ಲ. ಈ ಹಿನ್ನಲೆಯಲ್ಲಿ ತಕ್ಷಣವೇ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ರಾಜ್ಯ ಸರಕಾರಕ್ಕೆ ಆಯೋಗ ಸೂಚಿಸಿದೆ. ಈ ಶೈಕ್ಷಣಿಕ ವರ್ಷವನ್ನು ಪರೀಕ್ಷೆ ರಹಿತ ವರ್ಷವೆಂದು ಘೋಷಿಸಿ ಮಾರ್ಗಸೂಚಿ ರಚಿಸಿ ಸರಕಾರದ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರವನ್ನು ಕಳುಹಿಸಿದೆ.
ಕೋವಿಡ್-19 ಮಧ್ಯೆ ಶಾಲೆಗಳಲ್ಲಿ ಭಯಮುಕ್ತ ವಾತಾವರಣವನ್ನು ರಾಜ್ಯ ಸರಕಾರ ಕಲ್ಪಿಸಿಕೊಡಬೇಕು. ಶಾಲೆಗಳು ಆರಂಭವಾಗದಿದ್ದರೆ ಅನೇಕ ಕಡೆಗಳಲ್ಲಿ ಬಾಲ ಕಾರ್ಮಿಕತೆ, ಮಕ್ಕಳ ಸಾಗಾಟ ಮತ್ತು ಬಾಲ್ಯ ವಿವಾಹದಂತಹ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಆಯೋಗ ಆತಂಕ ವ್ಯಕ್ತಪಡಿಸಿದೆ.
30ಕ್ಕಿಂತ ಕಡಿಮೆ ಮಕ್ಕಳನ್ನು ಸೇರಿಸಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸಿ, 15 ದಿನಗಳವರೆಗೆ ಅರ್ಧ ದಿನ ಮಾತ್ರ ಶಾಲೆಗಳು ಇರಲಿ, ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿರುವ ತರಗತಿಗಳಲ್ಲಿ ಹಂತ ಹಂತವಾಗಿ ಶಾಲೆಗಳನ್ನು ತೆರೆಯಿರಿ. ಮಕ್ಕಳ ಶುಚಿತ್ವಕ್ಕೆ ಶಾಲೆಗಳಲ್ಲಿ ಮೂಲ ಸೌಕರ್ಯಗಳಿರಬೇಕು. ಕೊರೋನಾ ಸೋಂಕು ಹರಡುವ ಬಗ್ಗೆ ಶಾಲೆಗಳು ಮಕ್ಕಳಿಗೆ ಮತ್ತು ಪೆÇೀಷಕರಿಗೆ ಜಾಗೃತಿ ಮೂಡಿಸಬೇಕು. 11 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕರ್ತವ್ಯಕ್ಕೆ ಹಾಜರಾಗುವ ಮುನ್ನ ಶಿಕ್ಷಕರು ಕಡ್ಡಾಯವಾಗಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡು ಬರಬೇಕು. ಶಾಲೆಗಳಲ್ಲಿ ಕೈ ತೊಳೆಯುತ್ತಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ರೂಢಿಸಿಕೊಳ್ಳಬೇಕು. ಪ್ರಾಥಮಿಕ, ಮಾಧ್ಯಮಿಕ, ಪ್ರೌಢಶಾಲಾ ಮಕ್ಕಳಿಗೆ ಪ್ರತ್ಯೇಕ ಶಿಷ್ಟಾಚಾರವನ್ನು ಹೊರಡಿಸಬೇಕು.
ಈ ಬಗ್ಗೆ ಪ್ರತಿಕ್ರಯಿಸಿರುವ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖಾ ಸಚಿವ ಕೆ ಗೋಲಾಪಯ್ಯ ಅವರು, ಶಾಲೆಗಳನ್ನು ಆರಂಭಿಸುವ ಬಗ್ಗೆ ಸಚಿವ ಸಂಪುಟ ನಿರ್ಧಾರ ಕೈಗೊಳ್ಳಲಿದೆ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳು, ಪೆÇೀಷಕರು ಮತ್ತು ಶಿಕ್ಷಣ ಸಂಸ್ಥೆಗಳ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಸರಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಶಿಕ್ಷಣ ತಜ್ಞರು ಮತ್ತು ಬುದ್ಧಿಜೀವಿಗಳ ಜೊತೆ ಚರ್ಚಿಸಿ ಸರಕಾರ ಒಂದು ನಿರ್ಧಾರಕ್ಕೆ ಬರಲಿದೆ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಾಧಕ-ಬಾಧಕಗಳ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
0 comments:
Post a Comment