ಡಿಸೆಂಬರ್ ಅಂತ್ಯದವರೆಗೆ ಶಾಲಾ ಕಾಲೇಜು ಆರಂಭ ಇಲ್ಲ : ಸಿಎಂ ಘೋಷಣೆ - Karavali Times ಡಿಸೆಂಬರ್ ಅಂತ್ಯದವರೆಗೆ ಶಾಲಾ ಕಾಲೇಜು ಆರಂಭ ಇಲ್ಲ : ಸಿಎಂ ಘೋಷಣೆ - Karavali Times

728x90

23 November 2020

ಡಿಸೆಂಬರ್ ಅಂತ್ಯದವರೆಗೆ ಶಾಲಾ ಕಾಲೇಜು ಆರಂಭ ಇಲ್ಲ : ಸಿಎಂ ಘೋಷಣೆಬೆಂಗಳೂರು, ನ. 23, 2020 (ಕರಾವಳಿ ಟೈಮ್ಸ್) : ಆರೋಗ್ಯ ಇಲಾಖೆ ಮತ್ತು ತಾಂತ್ರಿಕ ಸಲಹಾ ಸಮಿತಿ ವರದಿಯನ್ನು ಆಧರಿಸಿದ ಡಿಸೆಂಬರ್ ಅಂತ್ಯದವರೆಗೆ ಶಾಲಾ ಕಾಲೇಜುಗಳನ್ನು ಆರಂಭಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

  ವಿಧಾನ ಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಬಿಬಿಎಂಪಿ, ಗ್ರಾಮೀಣಾಭಿವೃದ್ದಿ ಇಲಾಖೆ, ಸಾರಿಗೆ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಚೆರ್ಚೆ ನಡೆಸಲಾಗಿದ್ದು, ಆರೋಗ್ಯ ಇಲಾಖೆ ಮತ್ತು ತಾಂತ್ರಿಕ ಸಮಿತಿ ನೀಡಿರುವ ವರದಿಯನ್ನು ಆಧರಿಸಿ ಈ ತೀರ್ಮಾನಕ್ಕೆ ಬರಲಾಗಿದೆ. 

ಚಳಿಗಾಲದ ಹಿನ್ನಲೆಯಲ್ಲಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಸಮಿತಿ ವರದಿ ನೀಡಿದೆ. ಅಲ್ಲದೆ, ನವೆಂಬರ್ ಅಂತ್ಯ ಹಾಗೂ ಡಿಸೆಂಬರ್ ತಿಂಗಳಲ್ಲಿ ಕೋವಿಡ್-19 2ನೇ ಅಲೆ ಕಂಡು ಬರುವ  ಸಾಧ್ಯತೆ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳನ್ನು ಆರಂಭಿಸದೆ ಹಾಲಿ ವ್ಯವಸ್ಥೆಯನ್ನು ಮುಂದುವರಿಸಿಕೊಂಡು ಹೋಗಲು ತೀರ್ಮಾನಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ. 

ಡಿಸೆಂಬರ್ 3ನೇ ವಾರ ಮತ್ತೊಮ್ಮೆ ಸಭೆ ಸೇರಿ ತಾಂತ್ರಿಕ ಸಲಹಾ ಸಮಿತಿ ಹಾಗೂ ಆರೋಗ್ಯ ಇಲಾಖೆಗಳ ಅಭಿಪ್ರಾಯಗಳನ್ನು ಪಡೆದು ಶಾಲೆ ಆರಂಭಿಸಬೇಕೆ ಅಥವಾ ಬೇಡವೇ ಎಂಬುದರ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

ಈಗಾಗಲೇ ಅಂತಿಮ ವರ್ಷದ ಪದವಿ ಕಾಲೇಜುಗಳು ಆರಂಭವಾಗಿವೆ. ಶಾಲೆಗಳನ್ನು ಆರಂಭಿಸುವ ಚಿಂತನೆಯಿದೆ. ಆದರೆ ಶಾಲೆ ಆರಂಭಕ್ಕೂ ಮುನ್ನ ವಿದ್ಯಾರ್ಥಿಗಳು ಹಾಗೂ ಪೆÇೀಷಕರಿಗೆ ಸಂಬಂಧಿಸಿದಂತೆ ಅಭಿಪ್ರಾಯ ಸಂಗ್ರಹಿಸಲು ಅಧಿಕಾರಿಗಳ ಸಭೆ ಕರೆಯಲಾಗಿದೆ. ಸಭೆಯಲ್ಲಿ ಕೇಳಿ ಬರುವ ಸಲಹೆ-ಸೂಚನೆ ಆಧಾರದ ಮೇಲೆ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಡಿಸೆಂಬರ್ ಅಂತ್ಯದವರೆಗೆ ಶಾಲಾ ಕಾಲೇಜು ಆರಂಭ ಇಲ್ಲ : ಸಿಎಂ ಘೋಷಣೆ Rating: 5 Reviewed By: karavali Times
Scroll to Top