ವಾಷಿಂಗ್ಟನ್, ನ. 08, (ಕರಾವಳಿ ಟೈಮ್ಸ್) : ಡೊನಾಲ್ಡ್ ಟ್ರಂಪ್ ನಾಲ್ಕು ವರ್ಷದ ಅಧಿಕಾರಾವಧಿ ಮುಕ್ತಾಯಗೊಳ್ಳಲಿದ್ದು ಅಮೆರಿಕಾದ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಆಯ್ಕೆ ಬಹುತೇಕ ಖಚಿತವಾಗಿದೆ.
ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬಿಡೆನ್ ಅಮೆರಿಕಾದ 46ನೇ ಅಧ್ಯಕ್ಷರಾಗಿ ಆಯ್ಕೆಯಾಗಲಿದ್ದಾರೆ. ಭಾರತ ಮೂಲದ ಕಮಲಾ ಹ್ಯಾರಿಸ್ ಉಪಾಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತ.
ತೀವ್ರ ಕುತೂಹಲ ಕೆರಳಿಸಿದ್ದ ಮತ ಎಣಿಕೆಯಲ್ಲಿ ಅಧ್ಯಕ್ಷ ಸ್ಥಾನಕ್ಕೇರಲು 270 ಮ್ಯಾಜಿಕ್ ನಂಬರ್ ಬೇಕಿತ್ತು. ಆದರೆ ಜೋ ಬೈಡನ್ 284 ಮತ ಪಡೆದಿದ್ದಾರೆ. ಡೊನಾಲ್ಡ್ ಟ್ರಂಪ್ 214 ಮತ ಪಡೆದಿದ್ದಾರೆ.
ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಸೋಲುಂಡಿದ್ದಾರೆ.
ಟ್ರಂಪ್ ವಿರುದ್ಧ ಗೆಲುವು ಸಾಧಿಸಿರುವ ಜೋ ಬೈಡನ್ ಅವರು ಟ್ವೀಟ್ ಮಾಡಿ ಅಮೆರಿಕಾ ಪ್ರಜೆಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.
0 comments:
Post a Comment