ಬೆಂಗಳೂರು, ನ. 26, 2020 (ಕರಾವಳಿ ಟೈಮ್ಸ್) : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ತಿಂಡಿಯ ಆಸೆ ತೋರಿಸಿ ಅತ್ಯಾಚಾರವೆಸಗಿದ 62 ವರ್ಷದ ವೃದ್ಧ ಅರ್ಚಕ ವೆಂಕಟರಮಣಪ್ಪ ಎಂಬಾತನನ್ನು ಬೆಂಗಳೂರು ಪೆÇಲೀಸರು ಬಂಧಿಸಿದ್ದಾರೆ. ನವೆಂಬರ್ 24 ರಂದು ಬೆಂಗಳೂರಿನ ದೇವನಹಳ್ಳಿ ಪ್ರದೇಶದಲ್ಲಿ ಘಟನೆ ನಡೆದಿದ್ದು, ಅರ್ಚಕ ತನ್ನ ಮಗಳ ಮನೆಯಲ್ಲಿ ಈ ಕೃತ್ಯ ಎಸಗಿದ್ದಾನೆ. ದೇವಾಲಯವೊಂದರ ಅರ್ಚಕನಾಗಿರುವ ಈತ ದೇವನಹಳ್ಳಿಯ ಚೌಡೇಶ್ವರಿ ದೇವಸ್ಥಾನದ ಸಮೀಪದಲ್ಲಿ ವಾಸವಾಗಿರುವ ತನ್ನ ಮಗಳ ಮನೆಗೆ ತೆರಳಿದ್ದನು.
ಮಗಳ ಪತಿಯೂ ಚೌಡೇಶ್ವರಿ ದೇಗುಲದ ಅರ್ಚಕನಾಗಿದ್ದಾನೆ. ಹೀಗಾಗಿ ಎಂದಿನಂತೆ ದೇವಾಲಯದಲ್ಲಿ ಪೂಜೆ ಸಲ್ಲಿಸಲು ಹೋಗಿದ್ದನು. ನವೆಂಬರ್ 24ರಂದು ಸಂಜೆ 4.30ರ ವೇಳೆಗೆ ವೆಂಕಟರಮಣಪ್ಪ ಮಗಳ ಮನೆಯ ಹೊರಗಡೆ ಬಾಲಕಿ ಆಟವಾಡುತ್ತಿದ್ದುದನ್ನು ಕಂಡು ತಿಂಡಿಯ ಆಸೆ ತೋರಿಸಿ ಮನೆಗೆ ಕರೆದಿದ್ದಾನೆ. ಬಳಿಕ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಇತ್ತ ಆಟವಾಡಲು ಹೋದ ಬಾಲಕಿ ಬಹಳ ಹೊತ್ತಾದರೂ ಮನೆಗೆ ವಾಪಸ್ಸಾಗದಿದ್ದರಿಂದ ಆತಂಕಗೊಂಡು ಆಕೆಗಾಗಿ ಹುಡುಕಾಟ ಆರಂಭಿಸಿದ್ದಾರೆ. ಈ ವೇಳೆ ದೇವಸ್ಥಾನದ ಹೊರಗಡೆ ಹೂವು ಮಾರುತ್ತಿದ್ದ ಮಹಿಳೆ, ಬಾಲಕಿ ಅರ್ಚಕರ ಮನೆಗೆ ಹೋಗುತ್ತಿರುವುದನ್ನು ಕಂಡಿದ್ದಾಗಿ ಮಾಹಿತಿ ನೀಡಿದ್ದಾರೆ. ಕೂಡಲೇ ಕುಟುಂಬ ಅರ್ಚಕನ ಮನೆಗೆ ತೆರಳಿದೆ. ಈ ವೇಳೆ ಬಾಲಕಿ ಅಳುತ್ತಾ ಮನೆಯಿಂದ ಹೊರಗಡೆ ಬಂದಿದ್ದಾಳೆ. ಮನೆಯವರನ್ನು ಕಂಡ ಕೂಡಲೇ ಬಾಲಕಿ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಈ ವಿಚಾರ ಬಹಿರಂಗವಾಗುತ್ತಿದ್ದಂತೆಯೇ ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ. ಪೆÇಲೀಸರಿಗೂ ಮಾಹಿತಿ ನೀಡಿದ್ದಾರೆ. ಬಾಲಕಿಯನ್ನು ಸಮೀಪದ ಸರಕಾರಿ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ.
ಸಿಸಿಟಿವಿ ದೃಶ್ಯಾವಳಿ ಹಾಗೂ ಹೂವು ಮಾರುತ್ತಿದ್ದ ಮಹಿಳೆಯ ಹೇಳಿಕೆ ಆಧಾರದ ಮೇಲೆ ಪೆÇಲೀಸರು ವೆಂಕಟರಮಣಪ್ಪನನ್ನು ಬಂಧಿಸಿದ್ದಾರೆ. ಅಲ್ಲದೆ ಐಪಿಸಿ ಸೆಕ್ಷನ್ ಪೆÇಕ್ಸೋ ಕಾಯ್ದೆಯಡಿ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ಪೆÇಲೀಸರು ಮಾಹಿತಿ ನೀಡಿದ್ದಾರೆ.
















0 comments:
Post a Comment