ಹೊಸ ವರ್ಷ ಹಿನ್ನಲೆ : ಸಂಭ್ರಮಾಚರಣೆಗೆ ಬ್ರೇಕ್ ಹಾಕಲು ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ - Karavali Times ಹೊಸ ವರ್ಷ ಹಿನ್ನಲೆ : ಸಂಭ್ರಮಾಚರಣೆಗೆ ಬ್ರೇಕ್ ಹಾಕಲು ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ - Karavali Times

728x90

30 December 2020

ಹೊಸ ವರ್ಷ ಹಿನ್ನಲೆ : ಸಂಭ್ರಮಾಚರಣೆಗೆ ಬ್ರೇಕ್ ಹಾಕಲು ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

 


ಮಂಗಳೂರು, ಡಿ. 31, 2020 (ಕರಾವಳಿ ಟೈಮ್ಸ್) : ಹೊಸ ವರ್ಷಾಚರಣೆ ಸಂಭ್ರಮದಿಂದ ರೂಪಾಂತರಿ ಕೊರೋನಾ ಸೋಂಕು ಹೆಚ್ಚುವ ಭೀತಿ ಹಿನ್ನಲೆಯಲ್ಲಿ  ಮಂಗಳೂರಿನಲ್ಲಿ ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ನಡೆಸುವುದನ್ನು ನಿಷೇಧಿಸಲಾಗಿದೆ.

ಡಿ. 31 ರ ಸಂಜೆ 6 ಗಂಟೆಯಿಂದ ಜ.1ರ ಬೆಳಗ್ಗೆ 6 ಗಂಟೆಯವರೆಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಅನ್ವಯವಾಗಲಿದ್ದು, ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

ಈ ಸಮಯದಲ್ಲಿ ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ. ಸಾರ್ವಜನಿಕವಾಗಿ ಹೊಸ ವರ್ಷ ಆಚರಣೆ ಮಾಡುವಂತಿಲ್ಲ. ಹೋಟೆಲ್, ಪಬ್, ಕ್ಲಬ್ ಮಾಲ್ ಗಳಲ್ಲಿ ಹೊಸ ವರ್ಷಾಚರಣೆಗಾಗಿ ಯಾವುದೇ ವಿಶೇಷ ಕಾರ್ಯಕ್ರಮ ಆಯೋಜಿಸುವಂತಿಲ್ಲ ಎಂದು ಆದೇಶಿಸಲಾಗಿದೆ.  • Blogger Comments
  • Facebook Comments

0 comments:

Post a Comment

Item Reviewed: ಹೊಸ ವರ್ಷ ಹಿನ್ನಲೆ : ಸಂಭ್ರಮಾಚರಣೆಗೆ ಬ್ರೇಕ್ ಹಾಕಲು ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ Rating: 5 Reviewed By: karavali Times
Scroll to Top